ಬೆಂಗಳೂರು : ಫೆ.19, 20 ರಂದು ಬೆಂಗಳೂರಿನಲ್ಲಿ ಸರ್ಕಾರದಿಂದ ರಾಜ್ಯಮಟ್ಟದ ಉದ್ಯೋಗಮೇಳವನ್ನು ನಡೆಸುತ್ತಿದೆ. ಈ ನಡುವೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ- 2024 “ಯುವ ಸಮೃದ್ಧಿ ಸಮ್ಮೇಳನ”ವನ್ನು ಫೆ. 19 ಮತ್ತು 20 ಫೆಬ್ರವರಿ 2024 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬಹುದಾಗಿದೆ.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ- 2024 “ಯುವ ಸಮೃದ್ಧಿ ಸಮ್ಮೇಳನ”ವನ್ನು ದಿನಾಂಕ 26 ಮತ್ತು 27 ಫೆಬ್ರವರಿ 2024 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಈ ಕೂಡಲೇ ಇಲ್ಲಿರುವ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಿ.
ನೋಂದಣಿ ಹೇಗೆ..?
ಆಸಕ್ತ ಉದ್ಯೋಗಾಕಾಂಕ್ಷಿಗಳು ಆನ್ಲೈನ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಲು ಕರೆ ನೀಡಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು https://skillconnect.kaushalkar.com/ ವೆಬ್ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 1800 599 9918 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನೋಂದಣಿ ಮಾಡುವ ಹಂತಗಳು
1) ಮೊದಲು https://skillconnect.kaushalkar.com/new ಭೇಟಿ ನೀಡಿ
ಹಂತ 2 : ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ
ಹಂತ 3 : ಉದ್ಯೋಗ ಮೇಳ ಕ್ಲಿಕ್ ಮಾಡಿ
ಹಂತ 4: ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ
ಹಂತ 5 : ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ
ಉದ್ಯೋಗ ಮೇಳ ನಡೆಯುವ ದಿನಾಂಕ : ಫೆ 19 ಹಾಗೂ ಫೆ.20
ಸ್ಥಳ : ಅರಮನೆ ಮೈದಾನ, ಬೆಂಗಳೂರು
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ- 2024 "ಯುವ ಸಮೃದ್ಧಿ ಸಮ್ಮೇಳನ"ವನ್ನು ದಿನಾಂಕ 26 ಮತ್ತು 27 ಫೆಬ್ರವರಿ 2024 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಈ ಕೂಡಲೇ ಇಲ್ಲಿರುವ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಿ.https://t.co/9KgAG1ReKc pic.twitter.com/XKfyRkU0Jg
— 𝐊.𝐒.𝐃.𝐂 – ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (@Skill_Karnataka) February 2, 2024