ಬೆಂಗಳೂರು: ಫೆಬ್ರವರಿ.7ರಂದು ಕೇಂದ್ರ ಮದ್ಯಂತರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಆಗಿರೋ ಅನ್ಯಾಯ ಪ್ರತಿಭಟಿಸಿ, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಇದೇ ದಿನ ಬೆಂಗಳೂರಿನ ವಿಧಾನಸೌಧದಲ್ಲಿ ಬಿಜೆಪಿ ಶಾಸಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಇಂದಿನ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಫೆಬ್ರವರಿ.7ರಂದು ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸೋ ದಿನವೇ, ಬೆಂಗಳೂರಿನ ವಿಧಾನಸೌಧದಲ್ಲಿ ಬಿಜೆಪಿ ಶಾಸಕರಿಗೆ ಪ್ರತಿಭಟನೆ ನಡೆಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಹಂಪಿ: ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸೆಗಲಾಗಿದೆ. ರಾಜ್ಯಕ್ಕೆ ಬರಗಾಲದ ಪರಿಹಾರವಾಗಿ ಎನ್ ಡಿಆರ್ ಎಫ್ ನಿಂದ 4663 ಕೋಟಿ ರೂ. ಮೊತ್ತವನ್ನು ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳೂ ಕಳೆದಿದ್ದರೂ , ಕೇಂದ್ರದಿಂದ ಯಾವ ಸ್ಪಂದನೆಯೂ ದೊರೆತಿಲ್ಲ. ಈ ಎಲ್ಲ ಕಾರಣಗಳಿಗಾಗಿ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾನೂ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.