ಬೆಂಗಳೂರು: ದೊಡ್ಡ ಪ್ರಮಾಣದ ಹಾಗೂ ಸಾಮೂಹಿಕವಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದ ಸಂದರ್ಭದಲ್ಲಿ ಪ್ರತಿಯೊಬ್ಬರ ವರ್ಗಾವಣೆಗೂ ಸರ್ಕಾರ ಪ್ರತ್ಯೇಕ ಕಾರಣ ನೀಡುವುದು ಕಡ್ಡಾಯವಲ್ಲ ಎಂಬುದಾಗಿ ಹೈಕೋರ್ಟ್ ಸ್ಪಷ್ಟಪಡಿಸಿದೆ.
ತನ್ನನ್ನು ವರ್ಗಾವಣೆ ಮಾಡಿದ ಸರ್ಕಾರದ ಕ್ರಮ ಪುರಸ್ಕರಿಸಿದ ಕೆಎಟಿ ಆದೇಶ ರದ್ದು ಕೋರಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರಾಗಿದ್ದ ಎಸ್ ಎಸ್ ವೀಣಾ ಹಾಗೂ ಇತರೆ ಅಧಿಕಾರಿಗಳು ಸಲ್ಲಿಸಿದ್ದಂತ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರ ನೇತೃತ್ವದ ವಿಭಾಗಿಯ ಪೀಠವು ಈ ಆದೇಶ ನೀಡಿದೆ.
ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯದೇ ಹಾಗೂ ಸಕಾರಣ ನೀಡದೇ ತಮ್ಮನ್ನು ವರ್ಗಾಯಿಸಿರುವುದು ಕಾನೂನು ಬಾಹಿರ ಕ್ರಮ ಎಂಬ ಅರ್ಜಿದಾರರ ವಾದವನ್ನು ಹೈಕೋರ್ ತಳ್ಳಿಹಾಕಿದೆ.
ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದಾಗ ಮುಖ್ಯಮಂತ್ರಿಗಳ ಪೂರ್ವಾನುಮತಿ ಪೆಡು ಅರ್ಜಿದಾರರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಅಂಶ ಸ್ಪಷ್ಟವಾಗುತ್ತಿದೆ. ಇನ್ನೂ ಸಾಮೂಹಿಕ ವರ್ಗಾವಣೆ ಮಾಡಿದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಪ್ರತಿಯೊಬ್ಬ ಅಧಿಕಾರಿಯ ವರ್ಗಾವಣೆಗೂ ಕಾರಣ ಉಲ್ಲೇಖಿಸಲು ಕಷ್ಟವಾಗುತ್ತದೆ. ಪ್ರತಿಯೊಬ್ಬ ಅಧಿಕಾರಿಯ ವರ್ಗಾವಣೆಗೂ ಕಾರಣ ನಮೂದಿಸಬೇಕಾದ ಅನಿವಾರ್ಯತೆ ಇಲ್ಲ ಎಂಬುದಾಗಿ ತಿಳಿಸಿದೆ.