ಕಲಬುರ್ಗಿ : ಕಲಬುರ್ಗಿಯಲ್ಲಿ MBBS ಮಾಡಿಲ್ಲ ಅಂದ್ರೂ ಕ್ಲಿನಿಕ್ ಇಟ್ಕೊಂಡು ಚಿಕಿತ್ಸೆ ನೀಡಿ ಅಮಾಯಕರ ಜೀವನದ ಜೊತೆ ಆಟ ಆಡಲಾಗುತ್ತಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ನಕಲಿ ವೈದ್ಯರ ಮೇಲೆ ಹದ್ದಿನ ಕಣ್ಣಿಟ್ಟಿದೆ. ಸದ್ಯ ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಮಿತಿ ಮೀರಿದೆ. ಹೀಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ನಕಲಿ ವೈದ್ಯರ ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದು 109 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.
ಮಹಾಮಾರಿ ಕೊರೊನಾ ಬಂದು ಹೋದದ್ದೇ ತಡ ಹಣ ಮಾಡಲು ಕಳ್ಳದಾರಿ ಹಿಡಿಯುವವರ ಸಂಖ್ಯೆ ಹೆಚ್ಚಾಗಿದೆ. ಸದ್ಯ ಈಗ ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ.ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ.
KPME ಅನುಮತಿ ಪಡೆಯದೆ ರಾಜಾರೋಷವಾಗಿ ಜನರಿಗೆ ಚಿಕಿತ್ಸೆ ನೀಡಿ ಜನರ ಜೀವನದ ಜೊತೆ ಆಟ ಆಡುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಆರೋಗ್ಯ ಇಲಾಖೆ, ತಹಶೀಲ್ದಾರ್, ಪೊಲೀಸ್ ಟೀಂ ರಚಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಕಲಬುರಗಿ ಜಿಲ್ಲೆಯಲ್ಲಿ 109 ನಕಲಿ ವೈದ್ಯರು ಪತ್ತೆಯಾಗಿದ್ಧಾರೆ.
ಅಧಿಕಾರಿಗಳು ನಕಲಿ ವೈದ್ಯರ ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದು ಭರ್ಜರಿ ಭೇಟೆಯಾಡಿದ್ದಾರೆ. ಜಿಲ್ಲೆಯಲ್ಲಿ 109 ನಕಲಿ ವೈದ್ಯರನ್ನು ಪತ್ತೆ ಮಾಡಿ 43 ಕ್ಲಿನಿಕ್ಗಳನ್ನ ಬಂದ್ ಮಾಡಿಸಿದ್ದಾರೆ. KPME ಅನುಮತಿ ಪಡೆಯದೆ ಚಿಕಿತ್ಸೆ ನೀಡ್ತಿರುವ ಕ್ಲಿನಿಕ್ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ನೀಡಿದ ಮೇಲೂ ಅನುಮತಿ ಪಡೆಯದಿದ್ರೆ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ.