ಬೆಂಗಳೂರು: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ವರಲೆ ನೇಮಕಗೊಂಡ ನಂತ್ರ, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್ ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿತ್ತು. ಇಂತಹ ಅವರು ಇಂದು ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ಬೆಂಗಳೂರಿನ ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಕರ್ನಾಟಕ ಮುಖ್ಯ ನ್ಯಾಯಮೂರ್ತಿಯಾದಂತ ಪಿ.ಎಸ್ ದಿನೇಶ್ ಕುಮಾರ್ ಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.
ನಮ್ಮ 3ನೇ ಅವಧಿಯಲ್ಲಿ ‘ಭಾರತ’ವು ಮೂರನೇ ಅತಿದೊಡ್ಡ ‘ಆರ್ಥಿಕ ಶಕ್ತಿ’ಯಾಗಿ ಹೊರಹೊಮ್ಮಲಿದೆ- ಮೋದಿ
LK ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ: ಎಲ್ಲ ರಾಜಕಾರಣಿಗಳಿಗೆ ಅವರು ಮಾದರಿ – ಮಾಜಿ ಸಚಿವ KS ಈಶ್ವರಪ್ಪ