ಬೆಂಗಳೂರು: 18 ವರ್ಷ ತುಂಬದ ಮತ್ತು ಡಿಎಲ್ ಇಲ್ಲದ ವಿದ್ಯಾರ್ಥಿಗಳ ಪೋಷಕರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ. ನಗರದಲ್ಲಿ 1,500ಕ್ಕೂ ಹೆಚ್ಚು ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೆ ಸಂಚಾರಿ ಪೊಲೀಸರು ದಂಡದ ಹಾಕಿದ್ದಾರೆ. ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಸರ್ಕ್ಯುಲೇಷನ್ ಹೊರಡಿಸುವ ಭರವಸೆ ನೀಡಿವೆ ಎಂದು ದಕ್ಷಿಣ ವಿಭಾಗ ಸಂಚಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚೆಚ್ಚು ಮಕ್ಕಳು ಶಾಲಾ-ಕಾಲೇಜುಗಳಿಗೆ ದ್ವಿಚಕ್ರ ವಾಹನಗಳನ್ನು ತೆಗೆದುಕೊಂಡು ಬರುತ್ತಿದ್ದಾರೆ. ಈ ಸಂಖ್ಯೆ ವಿಪರೀತವಾದಂತೆ ಟ್ರಾಫಿಕ್ ಪೊಲೀಸರು ಎಚ್ಚೆತ್ತುಕೊಂಡು ನಗರದ 150ಕ್ಕೂ ಹೆಚ್ಚು ಶಾಲಾ-ಕಾಲೇಜುಗಳಿಗೆ ತೆರಳಿ ತಪಾಸಣೆ ನಡೆಸಿದ್ದಾರೆ.