ತುಮಕೂರು : ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಗೆ ಗಂಭೀರವಾದ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಇಡುಗುರು ಗ್ರಾಮದಲ್ಲಿ ನಡೆದಿದೆ. ಲೈನ್ ಮ್ಯಾನ್ ಇಮ್ರಾನ್ಗೆ ಎನ್ನುವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು,ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾನೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಇಡ್ಗೂರು ಗ್ರಾಮದಲ್ಲಿ ಲೈನ್ ದುರಸ್ತಿ ವೇಳೆ ವಿದ್ಯುತ್ ಪ್ರವಾಹಿಸಿ ಇಮ್ರಾನ್ ಪರದಾಟ ನಡೆಸಿದ್ದಾನೆ. ವಿದ್ಯುತ್ ಕಂಬದಲ್ಲೇ ಸಿಲುಕಿ ಲೈನ್ ಮ್ಯಾನ್ ಒದ್ದಾಟ ನಡೆಸಿದ್ದಾನೆ. ಕೂಡಲೇ ಸ್ಥಳಿಯರು ಲೈನ್ ಮ್ಯಾನ್ ಇಮ್ರಾನ್ ನನ್ನು ರಕ್ಷಣೆ ಮಾಡಿದ್ದಾರೆ.ಗುಬ್ಬಿ ಸರ್ಕಾರಿ ಆಸ್ಪತ್ರೆಯಲ್ಲಿ ಇಮ್ರಾನ್ಗೆ ಇದೀಗ ಚಿಕಿತ್ಸೆ ನೀಡಲಾಗುತ್ತಿದ್ದು ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕುಡಿದ ಮತ್ತಿನಲ್ಲಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ
ಕುಡಿದ ಮತ್ತಿನಲ್ಲಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಲ್ಲಸಂದ್ರ ಬಾಬಣ್ಣ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಹೇಮಂತ್ ಎಂಬುವ ನ ಮೇಲೆ ಇಬ್ಬರು ಕಿಡಿಗೇಡಿಗಳು ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಹಲ್ಲೆ ನಡೆಸಿರುವ ಕಿರಣ್ ಹಾಗೂ ಅಕ್ಷಯನನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಕುಡಿದ ಮತ್ತಿನಲ್ಲಿ ಹೇಮಂತ್ ಗೆ ಕಿರಣ್ ಹಾಗೂ ಅಕ್ಷಯ್ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.