ಬೆಂಗಳೂರು: ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಕೊಲೆ ಮಗ ಮಾಡಿದಲ್ಲ ಬದಲಿಗೆ ಅಪ್ಪನ ಕೊಲೆಯನ್ನು ತನ್ನ ಮೇಲೆ ಹಾಕಿಕೊಂಡು ಮಗನೇ ಪೊಲೀಸರಿಗೆ ತಾನೇ ಕೊಲೆ ಮಾಡಿದ್ದ ಎನ್ನಲಾಗಿದೆ.
ಈ ನಡುವೆ ಫಿಂಗರ್ ಪ್ರಿಂಟ್ ಪತ್ತೆಯಾದ ಹಿನ್ನೆಲೆ ತನಿಖೆ ನಡೆಸಿದ್ದ ಪೊಲೀಸರು ಕೊಲೆಯಲ್ಲಿ ತಂದೆ ಕೊಲೆ ಮಾಡಿದ್ದ ಎನ್ನಲಾಗಿದೆ. ಮಹಿಳೆ ಕೊಲೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದೆ. ಈ ನಡುವೆ ನೇತ್ರಾಳಿಗೆ ಅಕ್ರಮ ಸಂಬಂಧದ ಜೊತೆಗೆ ಕುಡಿತದ ಚಟ ಇತ್ತು. ಕೆಲವೊಮ್ಮೆ ಎರಡು ಮೂರು ದಿನಗಳ ಕಾಲ ಮನೆಗೆ ಬರ್ತಾ ಇರಲಿಲ್ಲ. ಹೀಗಾಗಿ ಮಗನ ಜೊತೆ ಸೇರಿ ಕೊಲೆ ಮಾಡಲು ನಿರ್ಧಾರ ಮಾಡಿದೆ ಎಂದು ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎನ್ನಲಾಗಿದೆ. ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಇರುತ್ತೆ, ಜೊತೆಗೆ ಅವರೇ ವಿದ್ಯಾಭ್ಯಾಸ ಕೊಡಿಸ್ತಾರೆ ಎಂದು ಅಪ್ಪನನ್ನು ಮಗ ಓಲೈಸಿದ್ದ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಮಗ ಪೊಲೀಸರ ಮುಂದೆ ಹೇಳಿದ್ದ ಎನ್ನಲಾಗಿದೆ.