ಮಧ್ಯಪ್ರದೇಶ : ಮಧ್ಯಪ್ರದೇಶದ ಹರ್ದಾದಲ್ಲಿ ಪಟಾಕಿ ಕಾರ್ಖಾನೆ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 11 ರಿಂದ 15 ಸ್ಪೋಟಗಳು ಸಂಭವಿಸಿದ್ದು ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಲವು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ತಿಳಿದುಬಂದಿದೆ.
ಮಧ್ಯಪ್ರದೇಶದ ಅರ್ಧದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು,ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದ್ದೂ, ಹಲವು ಕಾರ್ಮಿಕರಿಗೆ ಗಂಭೀರವಾದಂತಹ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.ಪಟಾಕಿ ಕಾರ್ಖಾನೆಯಲ್ಲಿ 11 ರಿಂದ 15 ಸ್ಪೋಟಗಳು ಸಂಭವಿಸಿವೆ.
ಕಾರ್ಖಾನೆಯಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.