ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಇತರೆ ಪಕ್ಷದ ಹಿರಿಯ ನಾಯಕರ ವಿರುದ್ಧ ಸುಳ್ಳು ಮತ್ತು ಪ್ರಚೋದನಕಾರಿ ಪೋಸ್ಟ್ ಮಾಡಿದಂತ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ. ಇಂದು ಕೋರ್ಟ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಆದೇಶಿಸಿದೆ.
ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪರವಾಗಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದಂತ ನ್ಯಾಯಪೀಠವು, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆಗೆ ಆದೇಶಿಸಿದೆ.
ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯ ಪೊಲೀಸರಿಗೆ ಬಿವೈ ವಿಜಯೇಂದ್ರ, ಬಿಜೆಪಿ ಪಕ್ಷದ ಹಿರಿಯ ನಾಯಕರ ಬಗ್ಗೆ ಸುಳ್ಳು ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ತನ್ನ ಆದೇಶದಲ್ಲಿ ನ್ಯಾಯಾಲಯ ಸೂಚಿಸಿದೆ. ಹೀಗಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಬಿಗ್ ಶಾಕ್, ಸಂಕಷ್ಟ ಎದುರಾದಂತೆ ಆಗಿದೆ.
ಅಂದಹಾಗೇ ಫೇಸ್ ಬುಕ್ ನಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಬಿಆರ್ ನಾಯ್ಡು ಎಂಬುವರು ಸುಳ್ಳು, ಪ್ರಚೋದನಕಾರಿ ಪೋಸ್ಟ್ ಒಂದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಹಾಕಿದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲೇ ಇದೀಗ ಸಂಕಷ್ಟ ಎದುರಾಗಿದೆ.
BREAKING: ‘ರಮೇಶ್ ಜಾರಕಿಹೊಳಿ’ ಮಾಲೀಕತ್ವದ ‘ಸಕ್ಕರೆ ಕಾರ್ಖಾನೆ’ ಮೇಲೆ ‘CID ಅಧಿಕಾರಿ’ಗಳ ದಾಳಿ
BREAKING : ICICI ಬ್ಯಾಂಕ್ ಮಾಜಿ ಸಿಇಒ ‘ಚಂದಾ ಕೊಚ್ಚಾರ್’ ಬಂಧನ ‘ಕಾನೂನು ಬಾಹಿರ’ : ಬಾಂಬೆ ಹೈಕೋರ್ಟ್