ಕೆಎನ್‌ಎನ್‌ಸಿನಿಮಾಡೆಸ್ಕ್: ವೆಂಕಟ್ ಭಾರದ್ವಾಜ್ ನಿರ್ದೇಶನದ `ನಗುವಿನ ಹೂಗಳ ಮೇಲೆ’ ಚಿತ್ರ ಇದೇ ಫೆಬ್ರವರಿ 9ರಂದು ತೆರೆಗಾಣಲಿದೆ. ಹದಿನೆಂಟರಿಂದ ಎಂಬತ್ತನೇ ವಯೋಮಾನದವರೆಗೂ ಹಿಡಿಸಬಲ್ಲಂಥಾ ವಿಶಿಷ್ಟ ಪ್ರೇಮ ಕಥೆ ಇಲ್ಲಿದೆ ಅಂತ ತಿಳಿಸಿದೆ ಸಿನಿಮಾತಂಡ. ಟ್ರೇಲರ್ ನೋಡಿದವರು ಸಿನಿಮಾ ವೀಕ್ಷಿಸುವ ಕುತೂಹಲ ವ್ಯಕ್ತಪಡಿಸಿದ್ದರ ಕೂಡ ಹೀಗಾಗಿ ಸಿನಿಮಾದ ಬಗ್ಗೆ ಕೂತುಹಲ ಉಂಟು ಮಾಡಿದೆ.
ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕರಾದ ಕೆ.ಕೆ ರಾಧ ಮೋಹನ್ ನಿರ್ಮಾಣ ಮಾಡಿದ್ದಾರೆ. ಅಭಿದಾಸ್ ಮತ್ತು ಶರಣ್ಯಾ ಈ ಚಿತ್ರದಲ್ಲಿ ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ಬಲ ರಾಜವಾಡಿ, ಆಶಾ ಸುಜಯ್, ಗಿರೀಶ್ ನಂಜಪ್ಪ, ಹರ್ಷಿತ್ ಗೌಡ, ಅಭಿಷೇಕ್ ಐಯಂಗಾರ್, ಹರೀಶ್ ಚೌಹಾಣ್, ಹರ್ಷ ಗೋ ಭಟ್ ಮುಂತಾದವರ ತಾರಾಗಣವಿದೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಅಭಿಷೇಕ್ ಐಯಂಗಾರ್ ಸಂಭಾಷಣೆ, ಲವ್ ಫ್ರಾನ್ ಮೆಹತಾ ಸಂಗೀತ ನಿರ್ದೇಶನ, ಚಂದನ್ ಪಿ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.