ಬೆಂಗಳೂರು:ಸಂಸತ್ತಿನ ಅಧಿವೇಶನ ಮುಗಿದ ನಂತರ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಸೀಟು ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
“ಜನರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ತಪ್ಪಲ್ಲ. ಆದರೆ, ಹಿರಿಯ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ, ಇಲ್ಲಿ ಪಕ್ಷದ ಮುಖಂಡರು ಅಥವಾ ಕಾರ್ಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ” ಎಂದು ಹೇಳಿದರು.
ಹಾಸನ ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಬಹುದು ಎಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ ಗೌಡ ಅವರ ಇತ್ತೀಚಿನ ಹೇಳಿಕೆಗೆ ಪ್ರಜ್ವಲ್ ಪ್ರತಿಕ್ರಿಯಿಸಿದರು.
ತಾವು ಹಾಗೂ ಪ್ರೀತಂ ಗೌಡ ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದೇವೆ ಎಂಬ ಬಿಜೆಪಿ ಮುಖಂಡ ಸಿ ಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿ ಚುನಾವಣೆಯಲ್ಲೂ ಒಂದೇ ರೀತಿಯ ಫಲಿತಾಂಶ ಬರಲು ಸಾಧ್ಯವಿಲ್ಲ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ರವಿಗೆ ಒಳ್ಳೆಯ ಭವಿಷ್ಯವಿದೆ ಎಂದರು.