ಶಿವಮೊಗ್ಗ: ಜಿಲ್ಲೆಯಲ್ಲಿ ಫೆಬ್ರವರಿ.7ರ ಇಂದಿನಿಂದ 10ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಎಫ್-01,ಎಫ್-02 ಮತ್ತು ಎಫ್-03 ಮಾರ್ಗದಲ್ಲಿ ಕುಡಿಯುವ ನೀರಿನ ಮಾರ್ಗಗಳ ಹೆಚ್ಚುವರಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.07 ರಿಂದ 10 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 06 ಗಂಟೆವರೆಗೆ ಪವರ್ ಕಟ್ ಆಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ.?
ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
BREAKING: 135 ದಿನಗಳ ಕಾಲ ಮೂರು ಹಂತದ ‘ಕದನ ವಿರಾಮ’ ಘೋಷಿಸಿದ ‘ಹಮಾಸ್’ | Israel-Hamas War
ರಾಜ್ಯ ಸರ್ಕಾರದ ‘ಚಲೋ ದೆಹಲಿ’ ಪ್ರತಿಭಟನೆಗೆ ಟಕ್ಕರ್: ವಿಧಾನಸಭೆ ಬಳಿ ಬಿಜೆಪಿ ಧರಣಿ