ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆ ಹೊಂದೋದು ಕಡ್ಡಾಯವಾಗಿದೆ. ಈ ಪರೀಕ್ಷೆ ಪಾಸ್ ಮಾಡಿದ್ರೆ ಮಾತ್ರವೇ ಬಡ್ತಿ ಸೇರಿದಂತೆ ವಿವಿಧ ಸವಲತ್ತುಗಳನ್ನು ಪಡೆಯೋದಕ್ಕೆ ಸಾಧ್ಯವಾಗುತ್ತದೆ. ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಬಗ್ಗೆ ಸರ್ಕಾರ ಮಹತ್ವದ ಮಾಹಿತಿಯನ್ನು ನೀಡಿದೆ. ಅದೇನು ಅಂತ ಮುಂದೆ ಓದಿ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಅಧಿನಿಯಮದ 3ನೇ ಪ್ರಕರಣದ 2ನೇ ಉಪ ಪ್ರಕರಣದ ಎ ಖಂಡದ ಮೂಲಕ ಅಗತ್ಯಪಡಿಸಲಾದಂತೆ ಬಾಧಿತರಾಗುವ ಸಂಭವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದಿದ್ದಾರೆ.
ಈ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಸೂಚಿಸಲಾಗಿದೆ.
ಈ ಕರಡಿನ ಬಗ್ಗೆ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001ಗೆ ಸಲ್ಲಿಸುವಂತೆ ಕೋರಲಾಗಿದೆ.
ಇನ್ನೂ ನಿಯಮ 2ಕ್ಕೆ ತಿದ್ದುಪಡಿಯನ್ನು ಪ್ರಕಟಿಸಲಾಗಿದ್ದು, ನಿಯಮ 2ರಲ್ಲಿ ದಿನಾಂಕ 31-12-2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31-12-2024ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01-01-2024ರಿಂದ ಜಾರಿಗೆ ಬಂದಿದೆ ಎಂದು ಭಾವಿಸುವಂತೆ ಹೇಳಲಾಗಿದೆ.
ನಿಯಮ 3ಕ್ಕೆ ತಿದ್ದುಪಡಿಯಲ್ಲಿ ಉಪನಿಯಮ 1ರಲ್ಲಿ ದಿನಾಂಕ 31-12-2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31-12-2024ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01-01-2024ರಿಂದ ಜಾರಿಗೆ ಬಂದಿದೆ ಎಂದು ಭಾವಿಸಿ ಪ್ರತಿಸ್ಠಾಪಿಸತಕ್ಕದ್ದು ಎಂದಿದ್ದಾರೆ.
ಉಪ ನಿಯಮ2ರಲ್ಲಿ ದಿನಾಂಕ 31-12-2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31—12-2024ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01-01-2024ರಿಂದ ಜಾರಿಗೆ ಬಂದಿದೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ‘ಚಲೋ ದೆಹಲಿ’ ಪ್ರತಿಭಟನೆಗೆ ಟಕ್ಕರ್: ವಿಧಾನಸಭೆ ಬಳಿ ಬಿಜೆಪಿ ಧರಣಿ
BREAKING : ದೆಹಲಿ ಮದ್ಯ ಹಗರಣ : ಫೆ.17ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ‘ಸಿಎಂ ಕೇಜ್ರಿವಾಲ್’ಗೆ ಕೋರ್ಟ್ ಸಮನ್ಸ್