ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ 10 ವರ್ಷಗಳ ಆರ್ಥಿಕ ಕಾರ್ಯಕ್ಷಮತೆಯನ್ನು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಆರ್ಥಿಕ ಸಾಧನೆಯೊಂದಿಗೆ ಹೋಲಿಸಲು ‘ಶ್ವೇತಪತ್ರ’ ತರುವುದಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಘೋಷಿಸಿದ ಕೆಲವು ದಿನಗಳ ನಂತರ, ಕಾಂಗ್ರೆಸ್ ಪಕ್ಷವು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ‘ಕಪ್ಪು ಕಾಗದ’ದೊಂದಿಗೆ ಅದನ್ನು ಎದುರಿಸಲು ಸಿದ್ಧತೆ ನಡೆಸುತ್ತಿದೆ.
ಈ ನಡುವೆ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕೇಂದ್ರವು ತರಲಿರುವ ‘ಶ್ವೇತಪತ್ರ’ಕ್ಕೆ ಪ್ರತಿಕ್ರಿಯೆಯಾಗಿ ಪಕ್ಷದ ‘ಕಪ್ಪು ಕಾಗದ’ವನ್ನು ಅನಾವರಣಗೊಳಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಸ್ಥಾಪಿಸಿದ ಸಾರ್ವಜನಿಕ ವಲಯದ ಉದ್ಯಮಗಳು (ಪಿಎಸ್ಯು) ಸೃಷ್ಟಿಸಿದ ಉದ್ಯೋಗಗಳ ಸಂಖ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಎಂದಿಗೂ ಉಲ್ಲೇಖಿಸಿಲ್ಲ ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ನಾವು ನಿರುದ್ಯೋಗದ ಪ್ರಮುಖ ವಿಷಯವನ್ನು ಎತ್ತುತ್ತಿದ್ದೇವೆ, ಅದರ ಬಗ್ಗೆ ಬಿಜೆಪಿ ಎಂದಿಗೂ ಮಾತನಾಡುವುದಿಲ್ಲ… ಕೇರಳ, ಕರ್ನಾಟಕ, ತೆಲಂಗಾಣದಂತಹ ಬಿಜೆಪಿಯೇತರ ರಾಜ್ಯಗಳೊಂದಿಗೆ ತಾರತಮ್ಯ ಮಾಡಲಾಗುತ್ತಿದೆ ಅಂತ ಆರೋಪಿಸಿದರು.
ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯ ಆರಂಭಿಕ ಘೋಷಣೆಯಲ್ಲಿ, ಕೇಂದ್ರ ಸರ್ಕಾರವು 10 ವರ್ಷಗಳಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಆರ್ಥಿಕ ಕಾರ್ಯಕ್ಷಮತೆಯನ್ನು ಅದೇ ಅವಧಿಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಆರ್ಥಿಕ ಸಾಧನೆಯೊಂದಿಗೆ ಹೋಲಿಸಿ ‘ಶ್ವೇತಪತ್ರ’ ಬಿಡುಗಡೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿತ್ತು. ಕೇಂದ್ರದ ಉದ್ದೇಶಿತ ಶ್ವೇತಪತ್ರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತು, ರಾಜ್ಯಸಭೆ ಮತ್ತು ಲೋಕಸಭೆಯ ಉಭಯ ಸದನಗಳಲ್ಲಿ ಮಂಡಿಸಲಿದ್ದಾರೆ.
#WATCH | Congress President Mallikarjun Kharge releases 'Black Paper' against the Modi government pic.twitter.com/cxKvD9xyNO
— ANI (@ANI) February 8, 2024