ನವದೆಹಲಿ: ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ತಮ್ಮ ಜಾತಿಯ ಬಗ್ಗೆ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದರು. ಪ್ರಧಾನಿ ಸಾಮಾನ್ಯ ವರ್ಗಕ್ಕೆ ಸೇರಿದವರು ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿದವರಲ್ಲ ಎಂದು ಅವರು ಹೇಳಿದ್ದಾರೆ.
“ಪ್ರಧಾನಿ ಮೋದಿ ಒಬಿಸಿ ವರ್ಗದಲ್ಲಿ ಹುಟ್ಟಿಲ್ಲ. ಅವರು ಗುಜರಾತ್ನ ತೆಲಿ ಜಾತಿಯಲ್ಲಿ ಜನಿಸಿದರು” ಎಂದು ರಾಹುಲ್ ಗಾಂಧಿ ಹೇಳಿದರು. ಈ ಸಮುದಾಯಕ್ಕೆ 2000ನೇ ಇಸವಿಯಲ್ಲಿ ಬಿಜೆಪಿ ಒಬಿಸಿ ಎಂಬ ಹಣೆಪಟ್ಟಿ ನೀಡಿತ್ತು. ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದರು” ಎಂದು ಅವರು ಆರೋಪಿಸಿದರು. “ಅವರು ಒಬಿಸಿಯಲ್ಲಿ ಜನಿಸಲಿಲ್ಲ, ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದರು ಎಂಬ ಕಾರಣಕ್ಕಾಗಿ ಅವರು ತಮ್ಮ ಇಡೀ ಜೀವನದಲ್ಲಿ ಜಾತಿ ಗಣತಿ ನಡೆಸಲು ಅವಕಾಶ ನೀಡುವುದಿಲ್ಲ…” ಎಂದು ಯಾತ್ರೆಯ ವೇಳೆ ರಾಹುಲ್ ಗಾಂಧಿ ಹೇಳಿದ್ದಾರೆ.