ಬೆಂಗಳೂರು: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಆರೋಪ ಕೇಳಿ ಬಂದಿತ್ತು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಇಡೀ ಪ್ರಕರಮವನ್ನು ಸಿಐಡಿ ತನಿಕೆಗೆ ಒಪ್ಪಿಸಿ ಆದೇಶಿಸಿದ್ದಾರೆ. ಈ ಮೂಲಕ ಪರುಶುರಾಮ ಥೀಂ ಪಾರ್ಕ್ ಹಗರಣವನ್ನು ರಾಜ್ಯ ಸರ್ಕಾರದಿಂದ ಸಿಐಡಿ ತನಿಖೆಗೆ ವಹಿಸಿ ಆದೇಶಿಸಲಾಗಿದೆ.
ಉಡುಪಿಯ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿನ ಅವ್ಯವಹಾರದ ಬಗ್ಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವಂತ ಲಕ್ಷ್ಮೀ ಹೆಬ್ಬಾಳ್ಕರ್ ತನಿಖೆಗೆ ವಹಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಶಿಫಾರಸ್ಸು ಮಾಡಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಈಗ ಸಿಎಂ ಸಿದ್ಧರಾಮಯ್ಯ ಅವರು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದ್ದಾರೆ.
ಅಂದಹಾಗೇ ಫೆಬ್ರವರಿ.2ರಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಬಿಜೆಪಿ ಅವಧಿಯಲ್ಲಿ ನಿರ್ಮಿಸಲಾಗಿದ್ದಂತ ಪರಶುರಾಮ ಥೀಂ ಪಾರ್ಕ್ ನಲ್ಲಿನ ಕಳಪೆ ಕಾಮಗಾರಿ, ಹಗರಣದ ಬಗ್ಗೆ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದರು. ಅದರಲ್ಲಿ ಕಾಮಗಾರಿಯಲ್ಲಿ ನಡೆದಿರುವಂತ ಕಳಪೆ ಕಾಮಗಾರಿ, ಅವ್ಯವಹಾರ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರ ಸಂಬಂಧ ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆಯೂ ವಿಸ್ತೃತವಾಗಿ ಮನವರಿಕೆ ಮಾಡಿಕೊಟ್ಟಿದ್ದರು.
BREAKING NEWS: ‘ಮ್ಯಾನ್ಮಾರ್’ ಜೊತೆಗಿನ ‘ಮುಕ್ತ ಸಂಚಾರ ವ್ಯವಸ್ಥೆ’ಯನ್ನು ರದ್ದುಗೊಳಿಸಿದ ‘ಭಾರತ’
Janaspanda: ಸಿಎಂ ‘ಜನಸ್ಪಂದನ’: ವಿಶೇಷ ಚೇತನ ವ್ಯಕ್ತಿಗೆ ‘ಸಿದ್ಧರಾಮಯ್ಯ ಮಾನವೀಯ ನೆರವು’