ಕೆಎನ್‌ಎನ್‌ಸಿನಿಮಾಡೆಸ್ಕ್: ‘ತಾರಕಾಸುರ’ ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ಭರವಸೆ ಮೂಡಿಸಿರುವ ಯಂಗ್ ಹೀರೋ ರವಿ ಈಗ ‘ಕೈಲಾಸ ಕಾಸಿದ್ರೆ’ ಎಂಬ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ. ಅಂದ ಹಾಗೇ ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಮೂಸಿರುವ ಕೈಲಾಸ ಚಿತ್ರತಂಡದಿಂದ ಕನ್ನಡದ ಮಟ್ಟಿಗೆ ಹೊಸತೆನ್ನಿಸುವಂಥ ಟ್ರಾನ್ಸ್ ಸಾಂಗ್ ಒಂದನ್ನು ಬಿಡುಗಡೆ ಮಾಡಿದ್ದು. ಪಡ್ಡೆ ಹುಡುಗರು ಇದನ್ನು ಮೆಚ್ಚಿಕೊಳ್ಳುತ್ತಿದ್ದಾರೆ.
ಅಂದ ಹಾಗೇ ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಮೂಸಿರುವ ಕೈಲಾಸ ಚಿತ್ರತಂಡದಿಂದ ಕನ್ನಡದ ಮಟ್ಟಿಗೆ ಹೊಸತೆನ್ನಿಸುವಂಥ ಟ್ರಾನ್ಸ್ ಸಾಂಗ್ ಒಂದನ್ನು ಬಿಡುಗಡೆ ಮಾಡಿದ್ದು. ಪಡ್ಡೆ ಹುಡುಗರು ಇದನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಟ್ರಾನ್ಸ್ ವೀಡಿಯೋ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ನೋಡುಗರ ಕಡೆಯಿಂದ ಮೆಚ್ಚುಗೆಯನ್ನೂ ಪಡೆದುಕೊಳ್ಳುತ್ತಿದೆ. ಲೇಖಕ್ ಎಂ ಸಿದ್ದಾರ್ಥ ಸಾಹಿತ್ಯ ಒದಗಿಸಿದ್ದಾರೆ. ಆಶಿಕ್ ಅರುಣ್ ಸಂಗೀತ ಸಂಯೋಜನೆಯೊಂದಿಗೆ ಈ ಟ್ರಾನ್ಸ್ ವೀಡಿಯೋ ಸಾಂಗ್ ಮೂಡಿ ಬಂದಿದೆ. ಇದು ಕ್ರೈಂ ಕಂ ಕಾಮಿಡಿ ಜಾನರಿಗೊಳಪಡುವ ಚಿತ್ರ. ಪಕ್ಕಾ ಕಮರ್ಶಿಯಲ್ ಬಗೆಯಲ್ಲಿ ತಯಾರುಗೊಂಡಿರುವ ಇದು ನಾಗ್ ವೆಂಕಟ್ ನಿರ್ದೇಶನದ ಮೊದಲ ಸಿನಿಮಾ. ಮೂಲತಃ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ನಾಗ್ ವೆಂಕಟ್ ಅವರು ಕೈಲಾಸ ಕಾಸಿದ್ರೆ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಈ ಚಿತ್ರದಲ್ಲಿ ಕ್ರೈಂ ಹಾಗೂ ಕಾಮಿಡಿ ಮಿಳಿತವಾಗಿರೋದರಿಂದಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಕೂಡಾ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸಿನಿಮಾದಲ್ಲಿ ರವಿ ಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. ಶಿವಾಜಿ ಸುರತ್ಕಲ್ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ ಕೈಲಾಸ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, ಲೇಖಕ್ ಎಂ ಸಾಹಿತ್ಯ, ವಿನೋದ್ ರಾಜೇಂದ್ರನ್ ಛಾಯಾಗ್ರಹಣ, ಧನಂಜಯ ಬಿ ನೃತ್ಯ ನಿರ್ದೇಶನವಿದೆ.