ಬೆಂಗಳೂರು: ಹತ್ತು ವರ್ಷ ಅನ್ಯಾಯ ಕಾಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತವನ್ನು ನರೇಂದ್ರ ಮೋದಿಯವರು ಮತ್ತು ಬಿಜೆಪಿಯ ನಾಯಕರು ‘’ಅಮೃತ ಕಾಲ’’ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ ವಿನಾಶ ಕಾಲ. ಈ ಅವಧಿಯಲ್ಲಿ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ಶೋಷಿತರು ಮತ್ತು ಜನಸಾಮಾನ್ಯರು ಎದುರಿಸುತ್ತಿರುವ ಕಷ್ಟ ಕಾರ್ಪಣ್ಯಗಳು ಐದರಿಂದ ಹತ್ತು ಪಟ್ಟು ಹೆಚ್ಚಾಗಿದೆ ಎಂದಿದ್ದಾರೆ.
ಹತ್ತು ವರ್ಷಗಳ ಹಿಂದೆ ನರೇಂದ್ರ ಮೋದಿ ಅವರು ಈ ದೇಶದ ಮತದಾರರಿಗೆ ನೀಡಿದ್ದ ಒಂದೇ ಒಂದು ಭರವಸೆಯನ್ನು ಕೂಡ ಪೂರ್ಣ ಪ್ರಮಾಣದಲ್ಲಿ ಈಡೇರಿಸಿಲ್ಲ. ರೈತರ ಆದಾಯದ ದುಪ್ಪಟ್ಟು, ಯುವಜನರಿಗೆ ವಾರ್ಷಿಕ 2 ಕೋಟಿ ಉದ್ಯೋಗ, ಮಹಿಳೆಯರಿಗೆ ರಕ್ಷಣೆ, ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಶೋಷಿತ ಸಮುದಾಯಗಳಿಗೆ ರಕ್ಷಣೆ, ಅಗ್ಗದ ದರದಲ್ಲಿ ಅಗತ್ಯವಸ್ತುಗಳ ಪೂರೈಕೆ ಮೊದಲಾದ ಬಣ್ಣಬಣ್ಣದ ಭರವಸೆಗಳನ್ನು ನೀಡಿ ಮೋದಿಯವರು ಚುನಾವಣೆಯಲ್ಲಿ ಗೆದ್ದಿದ್ದರು. ಗೆದ್ದ ನಂತರ ಜನರಿಗೆ ನೀಡಿದ್ದ ಭರವಸೆಗಳನ್ನು ಮರೆತು ದೇವರು-ಧರ್ಮದ ಹೆಸರಿನ ಭಾವನಾತ್ಮಕ ರಾಜಕಾರಣ, ಉದ್ಯಮಿಗಳ ತುಷ್ಟೀಕರಣದಲ್ಲಿ ಮುಳುಗಿ ಹೋಗಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ಹತ್ತು ವರ್ಷಗಳ ನರೇಂದ್ರ ಮೋದಿಯವರ ಅನ್ಯಾಯಕಾಲದ ವಿವರಗಳನ್ನು ಅಂಕಿಅಂಶಗಳ ಸಹಿತ ಕರ್ನಾಟಕದ ಜನತೆಯ ಮುಂದೆ ಇಡುತ್ತಿದ್ದೇನೆ. ದೇಶ ಇಂದು ಅಮೃತ ಕಾಲದಲ್ಲಿ ಇದೆಯೋ? ಅನ್ಯಾಯದ ಕಾಲದಲ್ಲಿ ಇದೆಯೋ? ಎಂದು ಜನರೇ ತೀರ್ಮಾನಿಸಲಿ ಎಂದಿದ್ದಾರೆ.
ಈಗಲೂ ಬಸವರಾಜ ಬೊಮ್ಮಾಯಿ ಕರ್ನಾಟಕದ ಸಿಎಂ! ರಾಜ್ಯ ಸರ್ಕಾರದ ವೆಬ್ಸೈಟ್ನಲ್ಲಿ ಯಡವಟ್ಟು!
BREAKING: ಚಿಕ್ಕಬಳ್ಳಾಪುರದಲ್ಲಿ ‘ಶಾಲಾ ಕ್ರೀಡಾಕೂಟ’ದ ವೇಳೆ ‘ವಿದ್ಯುತ್ ಅವಘಡ’: ಓರ್ವ ಸಾವು, ಹಲವರಿಗೆ ಗಾಯ