ಬೆಂಗಳೂರು : ಕೇಂದ್ರದಿಂದ ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಅನುಸರಿಸುತ್ತಿರುವ ತಾರತಮ್ಯಕ್ಕೆ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಕೇಂದ್ರದ NDRF ಅಡಿ ರೈತರಿಗೆ ಹಣ ಕೊಡುವುದು ವಿಳಂಬವಾಗುತ್ತಿದೆ.ಕಳೆದ ವರ್ಷ ರೈತರಿಗೆ ಕೊಡಬೇಕಾದ ಹಣ ಲೂಟಿಯಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯದಲ್ಲಿ ಕರ್ನಾಟಕ ಎರಡನೇ ಸ್ಥಾನ ಹೊಂದಿದೆ. ಹಾಗಾಗಿ ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ.ಬರ ಪರಿಹಾರಕ್ಕಾಗಿ ಪ್ರತಿಪಕ್ಷಗಳು ಕೂಡ ಒತ್ತಾಯ ಮಾಡಬೇಕಿದೆ.ನಮಗೆ ರಾಜ್ಯದ ಜನರ ಹಿತ ಮುಖ್ಯ ರಾಜಕೀಯ ಮುಖ್ಯ ಅಲ್ಲ ಎಂದು ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
18,172 ಕೋಟಿ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಸೆಪ್ಟೆಂಬರ್ 13ರಂದು ಬರ ಪೀಡಿತ ತಾಲೂಕುಗಳಾಗಿ ಕೂಡ ಘೋಷಣೆ ಮಾಡಿದ್ದೇವೆ. ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಪರಿಹಾರಕ್ಕೆ ಕೇಂದ್ರ ಕೃಷಿ ಕಾರ್ಯದರ್ಶಿಯನ್ನು ಕೂಡ ಭೇಟಿ ಮಾಡಿದ್ದೇವೆ. ಡಿಸೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಮಾಡಿದ್ದೇವೆ.ಜನವರಿ ಎಲ್ಲೂ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಮಾಡಿದ್ದಾರೆ.
ಆದರೆ ಕೇಂದ್ರ ಸರ್ಕಾರ ಸಭೆ ಮಾಡಿ ಯಾವದೆ ತೀರ್ಮಾನ ಕೈಗೊಂಡಿಲ್ಲ. ಕೇಂದ್ರ ಸರ್ಕಾರದ ಎನ್ ಡಿ ಆರ್ ಎಫ್ ಅಡಿ ಹಣ ಕೊಡುವುದು ವಿಳಂಬವಾಗುತ್ತಿದೆ.ಕಳೆದ ವರ್ಷ ರೈತರಿಗೆ ಕೊಡಬೇಕಾದ ಹಣ ಲೂಟಿಯಾಗಿದೆ.ದುರುಪಯೋಗ ತಡೆಗಟ್ಟಲು ಹಿಂದಿನ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ ಎಂದು ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಹೇಳಿದರು.