ಮೈಸೂರು: ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರುತ್ತಾರೆ ಎಂಬುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಇಬ್ಬರು ಗೂಂಡಾಗಳು. ಇದು ಜನರಿಗೆ ಗೊತ್ತಿದೆ. ನನ್ನ ಮಾತಿಗೆ ಸಿನೆಮಾ ಸ್ಟೈಲಿನಲ್ಲಿ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲೇ ಸೆಟಲ್ಮೆಂಟ್ ಆಗಿದೆ. ಇನ್ನೊಂದು ಪಾರ್ಟ್ ಕೂಡ ಜೈಲಿನಲ್ಲೇ ಸೆಟಲ್ಮೆಂಟ್ ಆಗ್ತಾರೆ. ನೋಡ್ತಾ ಇರಿ. ಇಷ್ಟರಲ್ಲೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರುತ್ತಾರೆ ಎಂದರು.
ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆಯ ಬಗ್ಗೆ ಹೈಕಮಾಂಡ್ ಚರ್ಚೆ ಮಾಡುತ್ತಾರೆ. ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಇದರ ಬಗ್ಗೆ ಚರ್ಚೆಯಾಗಲಿದೆ. ಮುಂದಿನ ಅಭ್ಯರ್ಥಿಗಳು, ಮೈತ್ರಿ ಅಭ್ಯರ್ಥಿಯ ಬಗ್ಗೆ ಚರ್ಚೆಯಾಗೋ ಸಾಧ್ಯತೆ ಇದೆ ಎಂದರು.
ನಾನು ರಾಷ್ಟ್ರದ್ರೋಹಿ ಹೇಳಿಕೆ ನೀಡೋರ ವಿರುದ್ಧ ಕ್ರಮ ಕೈಗೊಳ್ಳುವಂತ ಕಾನೂನು ಜಾರಿಯಾಗಬೇಕು ಅಂದ್ರೇ, ಅವರ ವಿರುದ್ಧ ಕ್ರಮ ಕೈಗೊಳ್ಳದೇ ನನಗೆ ನೋಟಿಸ್ ಕೊಡ್ತಾರೆ ಎಂಬುದಾಗಿ ಕಿಡಿಕಾರಿದರು.
ಕೇಂದ್ರ ಗೃಹ ಸಚಿವ ‘ಅಮಿತ್ ಶಾ’ಗೆ ಈ ಸವಾಲು ಹಾಕಿದ ‘ಸಿಎಂ ಸಿದ್ಧರಾಮಯ್ಯ’
ಲೋಕಸಭಾ ಚುನಾವಣೆ 2024 : ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಚಿವ ವಿ.ಸೋಮಣ್ಣ ಫುಲ್ ಆಕ್ಟಿವ್