ಬೆಂಗಳೂರು: ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ.26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮತ್ತು ರಾಜ್ಯದ ಎಲ್ಲ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ ಮಧ್ಯಮ/ ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ.
ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರುhttps://skillconnect. kaushalkar.com ನಲ್ಲಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 1800-599-9918 ಸಂಪರ್ಕಿಸಲು ಕೋರಲಾಗಿದೆ.
ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಂಕ್ಷಿಗಳು ಹಾಗೂ ಖಾಸಗಿ ಕಂಪನಿ/ ಉದ್ಯೋಗದಾತರು “ಯುವ ಸಮೃದ್ಧಿ ಸಮ್ಮೇಳನ”ದ ಬೃಹತ್ ಉದ್ಯೋಗಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು/ ಉದ್ಯೋಗದಾತರು https://Skillconnect.kaushalkar.com/ ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಅಧಿಕಾರಿ/ ಸಿಬ್ಬಂಧಿಯವರನ್ನು ಕಚೇರಿ ವೇಳೆಯಲ್ಲಿ ಆಯಾ ಜಿಲ್ಲೆಯವರು ಸಂಪರ್ಕಿಸಬಹುದಾಗಿದೆ.