ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ಆರ್ಟಿಸಿ ಅಟ್ಟಹಾಸ ಮುಂದುವರೆದಿದ್ದು ಇದೀಗ ಬೆಂಗಳೂರಿನ ಯಶವಂತಪುರದ ಬಳಿ ಬೈಕ್ ಸವಾರನ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ರಾಜೇಂದ್ರ(45) ಎಂದು ಹೇಳಲಾಗುತ್ತಿದ್ದು, ಖಾಸಗಿ ಕಂಪನಿಯಲ್ಲಿ ರಾಜೇಂದ್ರ ಕಾರ್ಯನಿರ್ವಹಿಸುತ್ತಿದ್ದರು. ಅದೇ ರೀತಿ ಇಂದು ಬೆಳಿಗ್ಗೆ ಕೆಲಸಕ್ಕೆ ತೆರಳುವಾಗ ನಿಯಂತ್ರಣ ತಪ್ಪಿ ಬಿದ್ದ ಬೈಕ್ ಸವಾರನ ಮೇಲೆ ಕೆ ಎಸ್ ಆರ್ ಟಿ ಸಿ ಬಸ್ ಹರಿದಿದೆ. ಈ ವೇಳೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕೆ ಎಸ್ ಆರ್ ಟಿ ಸಿ ಬಸ್ ಹರಿದು ಬೈಕ್ ಸವಾರ ರಾಜೇಂದ್ರ (45) ಸಾವನ್ನಪ್ಪಿದ್ದಾನೆ.ಮೃತ ರಾಜೇಂದ್ರ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿ ಕಾರ್ಯವಹಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಮೆಜೆಸ್ಟಿಕ್ ಕಡೆ ಬರುತ್ತಿದ್ದ ಕೆಎ 06 P 984 ಸಂಖ್ಯೆಯ ಕೆಎಸ್ಆರ್ಟಿಸಿ ಬಸ್ ತುಮಕೂರು ವಿಭಾಗದ ತುರುವೇಕೆರೆ ಘಟಕದ ಬಸ್ ಎಂದು ಹೇಳಲಾಗುತ್ತಿದೆ.ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತಂತೆ ಯಶವಂತಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.