ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾಜಿ ಕಾಂಗ್ರೆಸ್ ನಾಯಕ ಪಕ್ಷದ ಬಗ್ಗೆ ಅತೃಪ್ತರಾಗಿದ್ದರು ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಮುಂದಿನ ದಿನಗಳಲ್ಲಿ ಚವಾಣ್ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಬಹುದು.
ಚವಾಣ್ ಸೋಮವಾರ ಮುಂಬೈನಲ್ಲಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿಯ ಉನ್ನತ ನಾಯಕರು ಕೂಡ ಕೇಸರಿ ಪಕ್ಷದ ಮುಂಬೈ ಪ್ರದೇಶ ಕಚೇರಿಗೆ ಆಗಮಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.