ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಅತ್ಯಂತ ಪ್ರಮುಖವಾಗಿರುವ ಅಂತಹ ಕ್ಷೇತ್ರ ಎಂದರೆ ಮಂಡ್ಯ ಲೋಕಸಭಾ ಕ್ಷೇತ್ರ. ಏಕೆಂದರೆ ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಟಿಕೆಟ್ ಕೊಡಬೇಕಾ ಅಥವಾ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ಕೊಡಬೇಕ ಎಂಬ ಗೊಂದಲ ಇದೀಗ ಬಿಜೆಪಿ ನಾಯಕರಿಗೆ ತಲೆ ಬಿಸಿ ಮಾಡಿದೆ.
ಈ ಹಿನ್ನೆಲೆಯಲ್ಲಿ ನಿನ್ನೆ ನಿಖಿಲ್ ಕುಮಾರಸ್ವಾಮಿಯು ಕೂಡ ಮಂಡ್ಯ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದಾರೆ. ಇದರಿಂದ ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಈ ಒಂದು ಸಭೆಯಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರು ಭಾಗಿಯಾಗಲಿದ್ದು, ನಿಖಿಲ್ ಅಥವಾ ಎಚ್ ಡಿ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಹೇರಲು ದೇವೇಗೌಡರಿಗೆ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ. ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಈಗಾಗಲೇ ನಿಖಿಲ್ ಕುಮಾರಸ್ವಾಮಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ನಿಖಿಲ್ ಸ್ಪರ್ಧಿಸಲು ಮನವೊಲಿಸುವಂತೆ ಜೆಡಿಎಸ್ ನಾಯಕರು ಹೆಚ್ ಡಿ ದೇವೇಗೌಡ ಅವರಿಗೆ ಮನವಿ ಮಾಡಿದ್ದಾರೆ.
ಮಂಡ್ಯ ಲೋಕಸಭೆ ಚುನಾವಣೆಗೆ ಕಣಕ್ಕಿಳಿಯಲು ನಿಖಿಲ ನಿರಾಕರಿಸಿರುವ ಹಿನ್ನೆಲೆಯಲ್ಲಿ ಇಂದು ದೇವೇಗೌಡರ ನಿವಾಸದಲ್ಲಿ ಮಹತ್ವದ ಸಭೆ ನಡೆಯಲಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಹಾಗೂ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದಾರೆ ಎನ್ನುವ ಗೊಂದಲಕ್ಕೆ ನಿನ್ನೆ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ವಿಷಯವಾಗಿ ಇಂದು ಮಂಡ್ಯ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಎಚ್ ಡಿ ದೇವೇಗೌಡರಿಗೆ ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.