ನವದೆಹಲಿ : ಚುನಾವಣೆ ವೇಳೆಯಲ್ಲಿ ತಪ್ಪು ಮಾಹಿತಿ ನೀಡಿದ್ದು ಅಲ್ಲದೆ ಪ್ರಮಾಣ ಪತ್ರದಲ್ಲಿ ಆಸ್ತಿ ಇವರ ಮುಚ್ಚಿಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಪ್ರಜ್ವಲ್ ರೇವಣ್ಣರ ಸಂಸದ ಸ್ಥಾನವನ್ನು ಅಸಿಂಧುಗೊಳಿಸಿತ್ತು. ಹೀಗೆ ನೆಲೆಯಲ್ಲಿ ಆ ಸಿಂಧು ರದ್ದು ಕೋರಿ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ ನಲ್ಲಿ ಇಂದು ಪ್ರಜ್ವಲ್ ರೇವಣ್ಣಗೆ ಅಗ್ನಿಪರೀಕ್ಷೆ ಎದುರಾಗಿದ್ದು, ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದೆ ಎಂದು ಹೇಳಲಾಗುತ್ತಿದೆ. ಇಂದು ಸುಪ್ರೀಂ ಕೋರ್ಟ್ ನಿಂದ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಚುನಾವಣೆ ವೇಳೆ ತಪ್ಪು ಮಾಹಿತಿ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮುಚ್ಚಿಟ್ಟ ಆರೋಪ ಹಿನ್ನೆಲೆಯಲ್ಲಿ ಸಂಸದ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟಿಗೆ ಅರ್ಜಿಯನ್ನು ಸಲ್ಲಿಸಿದ್ದರು.ಇದೀಗ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆ ನಡೆಸಿದ್ದು, ಇಂದು ಸುಪ್ರೀಂಕೋರ್ಟ್ ಇಂದ ಅಂತಿಮ ತೀರ್ಪು ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಏನಿದು ಆರೋಪ?
2019ರ ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಅಂದಿನ ಹಾಸನ ಬಿಜೆಪಿ ಅಭ್ಯರ್ಥಿಯಾಗಿದ್ದ ಎ ಮಂಜು ಮತ್ತು ವಕೀಲ ದೇವರಾಜೇಗೌಡ ಹೈ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಹೈಕೋರ್ಟ್ ಎ, ಮಂಜು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.
ಪ್ರಜ್ವಲ್ ಸರ್ಕಾರಿ ಜಮೀನು ಖರೀದಿಸಿದ್ದಾರೆ, ಆದಾಯ ತೆರಿಗೆ ವಂಚಿಸಿದ್ದಾರೆ. ಬೇನಾಮಿ ಆಸ್ತಿ ಗಳಿಸಿದ್ದಾರೆ. ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ರೂ. ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಖೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂ. ಹೊಂದಿದ್ದರೂ ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು ದೇವರಾಜೇಗೌಡ ಆರೋಪಿದ್ದರು.