ಕಲಬುರ್ಗಿ : ಜೀವನದಲ್ಲಿ ಜಿಗುಪ್ಸೆಗೊಂಡಂತಹ ತಾಯಿ ಮಗಳು ಇಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಬಾದ್ ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಕಲ್ಬುರ್ಗಿ ಜಿಲ್ಲೆಯ ಶಹಬಾದ್ ಬಳಿ ಇರುವ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತರನ್ನು ಕಲಬುರ್ಗಿ ಎಂಬಿ ನಗರದ ಬಡಾವಣೆಯ ನಿವಾಸಿಗಳು ಎಂದು ಹೇಳಲಾಗುತ್ತಿದೆ.ನದಿಗೆ ಹಾರಿ ಸುಮಲತಾ (45) ವರ್ಷ (22) ಎಂಬ ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಶಾಬಾದ್ ಬಳಿ ಇರುವ ಕಾಗಿನ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನೆನ್ನೆ ಸಂಜೆಯಿಂದ ತಾಯಿ ಹಾಗೂ ಮಗಳು ನಾಪತ್ತೆಯಾಗಿದ್ದರು ಎಂದು ಹೇಳಲಾಗುತ್ತಿದ್ದು, ಘಟನೆ ಕುರಿತಂತೆ ಶಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.