ನವದೆಹಲಿ: ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಯಪ್ರದಾ ಅವರನ್ನ ಬಂಧಿಸಿ ಫೆಬ್ರವರಿ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ರಾಂಪುರದ ಸಂಸದ/ ಶಾಸಕರ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ. ಜಯಪ್ರದಾ ವಿರುದ್ಧ ಏಳನೇ ಬಾರಿಗೆ ಜಾಮೀನು ರಹಿತ ವಾರಂಟ್ ಹೊರಡಿಸಿದ ನಂತರವೂ ಅವರು ಸೋಮವಾರ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ ಎಂದು ಹಿರಿಯ ಪ್ರಾಸಿಕ್ಯೂಷನ್ ಅಧಿಕಾರಿ ಅಮರನಾಥ್ ತಿವಾರಿ ಹೇಳಿದ್ದಾರೆ.
ವಿಶೇಷ ತಂಡ ರಚಿಸಿ ಜಯಪ್ರದಾ ಅವರನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ. ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ನಟಿ ‘ತಲೆಮರೆಸಿಕೊಂಡಿದ್ದಾರೆ’ ಎಂದು ಹೇಳಲಾಗಿದೆ.
ಏನಿದು ಪ್ರಕರಣ.?
ಜಯಪ್ರದಾ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ರಾಂಪುರದಿಂದ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸಿದ್ದರು. ಚುನಾವಣೆಯ ಸಮಯದಲ್ಲಿ, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಟಿಯ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳು ರಾಂಪುರದ ಸಂಸದ, ಶಾಸಕರ ನ್ಯಾಯಾಲಯದಲ್ಲಿ ನಡೆಯುತ್ತಿವೆ. ಆದರೆ ನಿಗದಿತ ದಿನಾಂಕದಂದು ವಿಚಾರಣೆಗೆ ಜಯಪ್ರದಾ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಅವರ ವಿರುದ್ಧ ಒಂದರ ನಂತರ ಒಂದರಂತೆ ಜಾಮೀನು ರಹಿತ ವಾರಂಟ್ ಹೊರಡಿಸಲಾಯಿತು. ಆದರೆ, ಜಯಪ್ರದಾ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.
BREAKING : ‘CEC, EC’ಗಳ ನೇಮಕಕ್ಕೆ ಹೊಸ ಕಾನೂನಿಗೆ ತಡೆ ನೀಡಲು ‘ಸುಪ್ರೀಂ’ ನಕಾರ : ಕೇಂದ್ರದ ಪ್ರತಿಕ್ರಿಯೆಗೆ ಸೂಚನೆ
ಮೈಸೂರು ಲ್ಯಾಂಪ್ಸ್: ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ – ಸಚಿವ ಎಂ.ಬಿ ಪಾಟೀಲ್
BIGG NEWS : 1 ಕೋಟಿ ಮನೆಗಳಿಗೆ ‘300 ಯೂನಿಟ್’ವರೆಗೆ ‘ಉಚಿತ ವಿದ್ಯುತ್’ : ಪ್ರಧಾನಿ ಮೋದಿ ಮಹತ್ವದ ಘೋಷಣೆ