ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಂದ ಶೇ.40ರಷ್ಟು ಕಮೀಷನ್ ಆರೋಪ ಮಾಡಿದ್ದಂತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧವೂ ಮಾಡಿದ್ದರು. ಆದ್ರೇ ಇದೀಗ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹಕಾರ ನೀಡುತ್ತಿದ್ದಾರೆ ಎಂಬುದಾಗಿ ಉಲ್ಟಾ ಹೊಡೆದಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ಸಹಕಾರವನ್ನು ಗುತ್ತಿಗೆದಾರರಿಗೆ ನೀಡುತ್ತಿದ್ದಾರೆ. ಶೀಘ್ರವೇ ಬಿಬಿಎಂಪಿಯ ಬಾಕಿ ಬಿಲ್ ಕೂಡ ಬಿಡುಗಡೆ ಮಾಡೋದಾಗಿ ಭರವಸೆ ನೀಡಿದ್ದಾರೆ ಎಂದರು.
ರಾಜ್ಯ ಸರ್ಕಾರದಿಂದ 1054 ಸಣ್ಣ ಗುತ್ತಿಗೆದಾರರ 1 ಕೋಟಿಗಿಂತ ಕಡಿಮೆ ಇರುವಂತ ಬಿಲ್ ಅನ್ನು 600 ಕೋಟಿ ರೂಪಾಯಿ ಹಣವನ್ನು ಲೋಕೋಪಯೋಗಿ ಇಲಾಖೆಯಿಂದ ಯಾವುದೇ ಲಂಚವನ್ನು ಪಡೆದೇ ಬಿಡುಗಡೆ ಮಾಡಿರೋದಾಗಿ ಹೇಳಿದ್ದಾರೆ.
ಒಟ್ಟಾರೆಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಗುತ್ತಿಗೆದಾರರಿಂದ ಕಮೀಷನ್ ಸ್ವೀಕರಿಸುತ್ತಿಲ್ಲ. ಗುತ್ತಿಗೆ ಬಾಕಿ ಬಿಲ್ ಅನ್ನು ಗುತ್ತಿಗೆದಾರರಿಗೆ ನೀಡುತ್ತಿರೋದಾಗಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.
‘UPI’ ಆರಂಭ ಅಸ್ತಿತ್ವದಲ್ಲಿರುವ ಬಲವಾದ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು: ಮಾರಿಷಸ್ ರಾಯಭಾರಿ
BIG NEWS: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’11 DYSP, 51 PI’ ವರ್ಗಾವಣೆ