ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷದಿಂದ ಜನತೆಗೆ ಗ್ಯಾರಂಟಿ ಯೋಜನೆಯೊಂದನ್ನು ಘೋಷಣೆ ಮಾಡಲಾಗಿದೆ. ಅದೇ ರೈತರಿಗೆ ಬೆಳೆಗಳ ಮೇಲೆ ಎಂಎಸ್ಪಿಯ ಕಾನೂನು ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿರೋದು ಆಗಿದೆ.
ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು, ರೈತ ಸಹೋದರರೇ, ಇಂದು ಐತಿಹಾಸಿಕ ದಿನ! ಸ್ವಾಮಿನಾಥನ್ ಆಯೋಗದ ಪ್ರಕಾರ ಪ್ರತಿಯೊಬ್ಬ ರೈತರಿಗೆ ಬೆಳೆಗಳ ಮೇಲೆ ಎಂಎಸ್ಪಿಯ ಕಾನೂನು ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮವು 15 ಕೋಟಿ ರೈತ ಕುಟುಂಬಗಳ ಸಮೃದ್ಧಿಯನ್ನು ಖಚಿತಪಡಿಸುವ ಮೂಲಕ ಅವರ ಜೀವನವನ್ನು ಬದಲಾಯಿಸುತ್ತದೆ. ಇದು ನ್ಯಾಯದ ಹಾದಿಯಲ್ಲಿ ಕಾಂಗ್ರೆಸ್ ನ ಮೊದಲ ಖಾತರಿಯಾಗಿದೆ ಎಂದು ಹೇಳಿದ್ದಾರೆ.
किसान भाइयों आज ऐतिहासिक दिन है!
कांग्रेस ने हर किसान को फसल पर स्वामीनाथन कमीशन के अनुसार MSP की कानूनी गारंटी देने का फैसला लिया है।
यह कदम 15 करोड़ किसान परिवारों की समृद्धि सुनिश्चित कर उनका जीवन बदल देगा।
न्याय के पथ पर यह कांग्रेस की पहली गारंटी है।#KisaanNYAYGuarantee
— Rahul Gandhi (@RahulGandhi) February 13, 2024
ವಿಶ್ವಗುರು ಬಸವಣ್ಣ, ಸಾಂಸ್ಕೃತಿಕ ನಾಯಕ: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಘೋಷವಾಕ್ಯ- ಸಿಎಂ ಸಿದ್ಧರಾಮಯ್ಯ
‘UPI’ ಆರಂಭ ಅಸ್ತಿತ್ವದಲ್ಲಿರುವ ಬಲವಾದ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು: ಮಾರಿಷಸ್ ರಾಯಭಾರಿ