ಬೆಂಗಳೂರು: ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ಖಾಯಂ ನಿರೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಬಿಗ್ ಶಾಕ್ ಎನ್ನುವಂತೆ ಅತಿಥಿ ಉಪನ್ಯಾಸಕರನ್ನು ಖಾಯಂ ಇಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ.
ಈ ಕುರಿತಂತೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ದೇವೇಗೌಡ ಅವರು ಮಾಡಿದಂತ ಪ್ರಸ್ತಾಪಕ್ಕೆ ಉತ್ತರಿಸಿರುವಂತ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು, ಅತಿಥಿ ಉಪನ್ಯಾಸಕರನ್ನು ಖಾಲಿ ಹುದ್ದೆಗೆ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶವಿಲ್ಲ ಎಂಬುದಾಗಿ ಸದನಕ್ಕೆ ಸ್ಪಷ್ಟ ಪಡಿಸಿದ್ದಾರೆ.
ಅಂದಹಾಗೆ ರಾಜ್ಯದ ಸರ್ಕಾರ ಪ್ರಥಮ ದರ್ಜೆ ಕಾಲೇಜಿನಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಖಾಯಂ ಮಾಡುವಂತೆ ಸರ್ಕಾರಕ್ಕೆ ಆಗ್ರಹ ಕೇಳಿ ಬಂದಿತ್ತು. ಆದ್ರೇ ಇದನ್ನು ಸರ್ಕಾರ ಈಗ ನಿರಾಕರಿಸಿದೆ.
ಒಟ್ಟಾರೆಯಾಗಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡೋದಕ್ಕೆ ಸಾಧ್ಯವಿಲ್ಲ. ಇದಕ್ಕಾಗಿ ನಿಯಮ ಕೂಡ ಇಲ್ಲ ಎಂಬುದಾಗಿ ಸರ್ಕಾರ ಹೇಳುವ ಮೂಲಕ, ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್ ನೀಡಲಾಗಿದೆ.
‘UPI’ ಆರಂಭ ಅಸ್ತಿತ್ವದಲ್ಲಿರುವ ಬಲವಾದ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು: ಮಾರಿಷಸ್ ರಾಯಭಾರಿ
ಗ್ರಾಮ ಪಂಚಾಯತಿಗಳನ್ನು ಸಾಮಾಜಿಕ, ಆರ್ಥಿಕವಾಗಿ ಬಲಿಷ್ಠಗೊಳಿಸಲು ಸರ್ಕಾರದ ಸಂಕಲ್ಪ- ಸಚಿವ ಪ್ರಿಯಾಂಕ್ ಖರ್ಗೆ