ಮಂಡ್ಯ: ತೀವ್ರ ಕುತೂಹಲ ಕೆರಳಿಸಿದ್ದಂತ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಲೋಕಸಭೆಗೆ ಸ್ಪರ್ಧಿಸೋ ಗೊಂದಲಕ್ಕೆ ತೆರೆ ಬಿದ್ದದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ಲೋಕಸಭೆಗೆ ಕುಮಾರಸ್ವಾಮಿ ನಿಲ್ಲೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಲೋಕಸಭೆಗೆ ಯಾರು ಅಭ್ಯರ್ಥಿ ಆಗಬೇಕು ಎನ್ನುವ ಬಗ್ಗೆ ಎಲ್ಲಾ ನಾಯಕರು ಬಹಳ ಸದ್ಭಾವನೆ ವ್ಯಕ್ತ ಮಾಡಿದ್ದಾರೆ. ನೀವು ನಿಲ್ಲಬೇಕು ಅಥವಾ ಕುಮಾರಸ್ವಾಮಿ ಅವರು ನಿಲ್ಲಬೇಕು ಇಲ್ಲವೇ ನಿಖಿಲ್ ನಿಲ್ಲಬೇಕು ಎಂದು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಆದರೆ, ನಾನು ನಿಲ್ಲುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನಿಖಿಲ್ ಅವರು ಕೂಡ ನಾನು ನಿಲ್ಲೋದಿಲ್ಲ, ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದರು.
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ನಮ್ಮ ಪಕ್ಷದ ಶಾಸಕಾಂಗ ಪಕ್ಷದ ನಾಯಕರು. ಇಲ್ಲಿ ಅವರು ಸದನದ ಒಳಗೆ, ಹೊರಗೆ ಹೋರಾಟ ನಡೆಸಬೇಕಿದೆ. ಹೀಗಾಗಿ ಅವರು ಲೋಕಸಭೆಗೆ ಹೋಗುವೆ ಎಂದು ಹೇಳಲ್ಲ, ಇರುವ ವಾಸ್ತವಾಂಶವನ್ನು ಹೇಳುತ್ತೇನೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟವಾಗಿ ಹೇಳಿದರು.
‘ಖಾಯಂ ನಿರೀಕ್ಷೆ’ಯಲ್ಲಿದ್ದ ‘ಅತಿಥಿ ಉಪನ್ಯಾಸಕ’ರಿಗೆ ಬಿಗ್ ಶಾಕ್: ‘ಸೇವೆ ಖಾಯಂ’ ಇಲ್ಲ – ‘ರಾಜ್ಯ ಸರ್ಕಾರ’ ಸ್ಪಷ್ಟನೆ
ನೀರಾವರಿ ಅಭಿವೃದ್ಧಿ, ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್