ಬೆಂಗಳೂರು : ಅಂಗಡಿ, ಮುಂಗಟ್ಟು, ಹೋಟೆಲ್ ಸೇರಿದಂತೆ ಎಲ್ಲ ರೀತಿಯ ವ್ಯಾಪಾರ, ವಾಣಿಜ್ಯೋದ್ಯಮಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ ಹಾಗೂ ನಾಮ ಫಲಕದ ಮೇಲ್ಬಾಗದಲ್ಲಿ ಕನ್ನಡ ಭಾಷೆ ಇರಬೇಕೆಂಬ ಉದ್ದೇಶದಿಂದ ರೂಪಿಸಿ ರುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದು ಪಡಿ) ವಿಧೇಯಕ- 2024’ಅನ್ನು ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಪರವಾಗಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಈ ವಿಧೇಯಕವನ್ನು ಸದನದಲ್ಲಿ ಮಂಡಿಸಿದರು. ವಿಧೆಯಕದಲ್ಲಿ ಪ್ರಮುಖವಾಗಿ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಕಡ್ಡಾಯ ಹಾಗೂ ಕನ್ನಡ ಭಾಷೆಯೇ ಮೇಲ್ಭಾಗದಲ್ಲಿ ಇರಬೇಕೆಂಬ ಅಂಶಗಳು ಅಷ್ಟೇ ಅಲ್ಲದೆ ನೂರಕ್ಕೂ ಹೆಚ್ಚು ಉದ್ಯೋಗಿಗಳಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸಂಸ್ಥೆಗಳಲ್ಲಿ ಕನ್ನಡ ಕೋಶ ಸ್ಥಾಪಿಸಬೇಕು.
ರಾಜ್ಯದ ಬ್ಯಾಂಕ್ ಹಣಕಾಸು ಸಂಸ್ಥೆಗಳಲ್ಲಿ ಸಾರ್ವಜನಿಕರೊಂದಿಗೆ ಸಂಪರ್ಕ ಹಾಗೂ ಪತ್ರ ವ್ಯವಹಾರಗಳಲ್ಲಿ ಕನ್ನಡ ಕಡ್ಡಾಯ. ಗ್ರಾಹಕರೊಂದಿಗೆ ಕನ್ನಡದಲ್ಲಿ ವಿವರಿಸುವ ಹಿರಿಯ ಉದ್ಯೋಗಿಗಳ ಕನ್ನಡ ಕೋಶ ಕನ್ನಡ ಬಾರದೆ ಇರುವುದು ಕನ್ನಡ ಕಲಿಸುವ ಕನ್ನಡ ಕಲಿಕಾ ಘಟಕ ಸ್ಥಾಪಿಸಬಕೆಂಬುವುದು ಬೇಕೆಂಬುದು ಸೇರಿದಂತೆ ಸಮಗ್ರ ಕನ್ನಡ ಅಭಿವೃದ್ಧಿಗೆ ಪೂರಕವಾಗಿ ಹಲವು ಅಂಶಗಳನ್ನು ಸೇರಿಸಲಾಗಿದೆ.
ಅಲ್ಲದೆ ಕಳೆದ ಕೆಲವು ದಿನಗಳ ಹಿಂದೆ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಅಗ್ರಹಿಸಿ ಅಲೋಕದ ಸಂಘಟನೆಗಳು ಹೋರಾಟ ಪ್ರತಿಭಟನೆ ನಡೆಸಿದವು. ಅಲ್ಲದೆ ಹಲವು ಕನ್ನಡ ಹೋರಾಟಗಾರರನ್ನು ಕೂಡ ಬಂಧಿಸಲಾಗಿತ್ತು.ಈ ವೇಳೆ ಕನ್ನಡ ಸಂಘಟನೆಗಳ ಹೋರಾಟಗಾರರ ಒತ್ತಡಕ್ಕೆ ಮಣಿದು ಕನ್ನಡ ಕಡ್ಡಾಯ ಕಾನೂನು ಜಾರಿಗೆ ಸಿಎಂ ಸಿದ್ದರಾಮಯ್ಯ ನಿರ್ಧರಿಸಿ ಕಳೆದ ಜನವರಿಯಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿತ್ತು.
ಆದರೆ ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕದೆ ಅಧಿವೇಶನದಲ್ಲಿ ಈ ಕುರಿತು ವಿಧೇಯಕ ಮಂಡಿಸಿ, ಒಪ್ಪಿಗೆ ಪಡೆಯುವಂತೆ ಸಲಹೆ ನೀಡಿ ಕಟದವನ್ನು ವಾಪಸ್ ಕಳುಹಿಸಿದ್ದರು. ಇದೀಗ ಸರ್ಕಾರ ಸದನದಲ್ಲಿ ವಿಧೇಯಕವನ್ನು ಮಂಡಿಸಿದ್ದು ಸದನದ ಒಪ್ಪಿಗೆ ಪಡೆದು ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.