ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಮ್ಮೇಳನವನ್ನು ಇದೇ ಫೆಬ್ರವರಿ 27, 28ರಂದು ನಡೆಸಲು ನಿಗದಿ ಪಡಿಸಲಾಗಿದೆ. ಈ ಸಮ್ಮೇಳನದಲ್ಲಿ ಭಾಗಿಯಾಗೋದಕ್ಕೆ ಸರ್ಕಾರಿ ನೌಕರರಿದೆ ಎರಡು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ 27-02-2024ರಂದು ಬೆಂಗಳೂರು ನಗರದಲ್ಲಿ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜಿಸಿರೋದಾಗಿ ತಿಳಿಸಿದ್ದಾರೆ.
ಈ ಸಮ್ಮೇಳನ, ಕಾರ್ಯಾಗಾರದಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತಗೊಳಿಸಿ, ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ, ನೌಕರರಿಗೆ ದಿನಾಂಕ 27-02-2024ರಂದು ಒಂದು ದಿನ ಹಾಗೂ ಇತರೆ ಜಿಲ್ಲೆಗಳ ಅಧಿಕಾರಿ, ನೌಕರರಿಗೆ ಪ್ರಯಾಣ ದಿನಗಳು ಸೇರಿದಂತೆ ದಿನಾಂಕ 27-02-2024 ಮತ್ತು 28-02-2024ರಂದು 2 ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿರೋದಾಗಿ ತಿಳಿಸಿದ್ದಾರೆ.
ಇನ್ನೂ ಈ ಸಮ್ಮೇಳನ, ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸುವಂತೆ ಸರ್ಕಾರಿ ನೌಕರರಿಗೆ ಕೆಲ ಷರತ್ತು ಕೂಡ ವಿಧಿಸಲಾಗಿದೆ. ಅದೇನು ಅಂದ್ರೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ಅರ್ಜಿಯನ್ನು ವಿಶೇಷ ಸಾಂದರ್ಭಿಕ ರಜೆಯ ಅರ್ಜಿಯನ್ನು ಸಲ್ಲಿಸಬೇಕು. ನೌಕರರ ಸಂಘದ ಅಧ್ಯಕ್ಷರು ಅಥವಾ ಇವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಇಂದ ಪಡೆದ ಅಧಿಕೃತ ಹಾಜರಾತಿ ಪತ್ರವನ್ನು ಒದಗಿಸಬೇಕು ಎಂಬುದಾಗಿ ತಿಳಿಸಿದ್ದಾರೆ.