ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಕರ್ನಾಟಕ ಸೇರಿದಂತೆ 6 ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಈ ಸಂಬಂಧ ಕಾಂಗ್ರೆಸ್ ಜನರಲ್ ಸೆಕ್ರೇಟರಿ ಮಾಹಿತಿ ನೀಡಿದ್ದು, 2024ರ ರಾಜ್ಯ ಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷರು ಈ ಕೆಳಕಂಡ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ ಎಂದಿದ್ದಾರೆ.
ಕರ್ನಾಟಕದಿಂದ ಅಜಯ್ ಮಕೇನ್, ಡಾ.ಸೈಯದ್ ನಾಸೀರ್ ಹುಸೇನ್ ಹಾಗೂ ಜಿಸಿ ಚಂದ್ರಶೇಖರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಇನ್ನೂ ಮದ್ಯಪ್ರದೇಶದಿಂದ ಅಶೋಕ್ ಸಿಂಗ್, ತೆಲಂಗಾಣದಿಂದ ರೇಣುಕ ಚೌದರಿ ಹಾಗೂ ಎಂ ಅನಿಲ್ ಕುಮಾರ್ ಯಾದವ್ ಅವರಿಗೆ ಟಿಕೆಟ್ ನೀಡಲಾಗಿದೆ.