ಬೆಂಗಳೂರು: ರಾಜ್ಯದಲ್ಲಿನ ಪಿಡಿಓ ವರ್ಗಾವಣೆಗೆ ಸರ್ಕಾರದ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪಿಡಿಓಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವರ್ಗಾವಮೆಯನ್ನು ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪಿಡಿಒಗಳು ಸಚಿವರು, ಶಾಸಕರಿಗೆ ಆಪ್ತ ಸಹಾಯಕರಾಗಲು ಒಪ್ಪಿಗೆ ಕೊಡುತ್ತಿಲ್ಲ. ಇದರಿಂದ ಗ್ರಾಮಗಳಲ್ಲಿನ ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿದೆ. 60 ರಿಂದ 70 ಜನ ಪಿಡಿಒಗಳು ಆಪ್ತ ಸಹಾಯಕರಾಗಿ ಹೋದರೆ, ದೊಡ್ಡ ಮಟ್ಟದಲ್ಲಿ ಕೊರತೆ ಆಗುತ್ತದೆ. ಆದ್ದರಿಂದ ಆಪ್ತ ಸಹಾಯಕರನ್ನಾಗಿ ತೆಗೆದುಕೊಳ್ಳುವುದನ್ನು ನಿಲ್ಲಿಸುವುದು ಒಳ್ಳೆಯದು. ಪಿಡಿಒಗಳ ವರ್ಗಾವಣೆಯಲ್ಲಿ ಸಮಸ್ಯೆ ಆಗುತ್ತಿದೆ. ಇದನ್ನು ತಪ್ಪಿಸಲು ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
BREAKING: ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಕೈ ಅಭ್ಯರ್ಥಿಗಳ ಪಟ್ಟಿ ಪ್ರಕಟ | Rajya Sabha Election 2024
1056 ಖಾಲಿ ಹುದ್ದೆಗಳ ಭರ್ತಿಗೆ ‘UPSC’ ಅಧಿಸೂಚನೆ ಬಿಡುಗಡೆ : ಅರ್ಜಿ ಸಲ್ಲಿಕೆಗೆ ‘ಡೈರೆಕ್ಟ್ ಲಿಂಕ್’ ಇಲ್ಲಿದೆ