ಬೆಂಗಳೂರು: ಕೊಬ್ಬರಿ ಖರೀದಿಗೆ ರೈತರ ನೋಂದಣಿ ಪ್ರಕ್ರಿಯೆ ಒಂದು ವಾರ ಸ್ಥಗಿತ ಮಾಡಲಾಗುವುದು ಅಂಥ ಇಂದು ಸದನದಲ್ಲಿ ಸಚಿವ ಶಿವಾನಂದ ಅವರು ಮಾಹಿತಿ ನೀಡಿದರು.
ಕೊಬ್ಬರಿ ಖರೀದಿಗೆ ರೈತರ ನೋಂದಣಿಯಲ್ಲಿ ಅವ್ಯವಹಾರ ನಡೆದಿರುವ ಕಾರಣಕ್ಕೆ ತಾತ್ಕಾಲಿಕವಾಗಿ ಒಂದು ವಾರ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ರೈತರ ನೋಂದಣಿ ಪ್ರಕ್ರಿಯೆಯಲ್ಲಿ ಮೇಲ್ನೋಟಕ್ಕೆ ಲೋಪಗಳು ಕಂಡುಬರುತ್ತಿವೆ. ಇಲಾಖೆಯಿಂದ ಖರೀದಿಸಲಾಗಿದ್ದ ಕಂಪ್ಯೂಟರ್ ಬದಲಿಗೆ ಅಧಿಕಾರಿಗಳು ಮತ್ತು ಹೊರಗುತ್ತಿಗೆ ಸಿಬ್ಬಂದಿ, ತಾವೇ ಬೇರೆ ಕಂಪ್ಯೂಟರ್ ಖರೀದಿಸಿ ಅದನ್ನು ರೈತರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿ ನೋಂದಣಿ ಮಾಡಿಸಿದ್ದಾರೆ. ಬೇರೆ ಜಿಲ್ಲೆಯಿಂದ 3,500 ರೈತರನ್ನು ಹಾಸನದಲ್ಲಿ ನೋಂದಣಿ ಮಾಡಲಾಗಿದೆ. ಹೀಗಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ 9 ಮಂದಿ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಲಾಗುತ್ತಿದೆ. ನೋಂದಣಿ ಪ್ರಕ್ರಿಯೆ ಪರಿಷ್ಕರಣೆ ಒಳಪಡಿಸಲಾಗುತ್ತಿದ್ದು, ಅಲ್ಲಿಯವರೆಗೆ ತಾತ್ಕಾಲಿಕವಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಅವರುಹೇಳಿದರು.
ದೇಶದಲ್ಲಿ ‘ವೇತನ ಅಂತರ’ ಹೆಚ್ಚಳ : ಭಾರತದಲ್ಲಿ ಶೇ.42ರಷ್ಟು ಮಹಿಳೆಯರಿಗೆ ಕಡಿಮೆ ಸಂಬಳ : ಸಮೀಕ್ಷೆ
ಕ್ಯಾಲಿಫೋರ್ನಿಯಾದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಶವಪತ್ತೆ. ಕೊಲೆ ಶಂಕೆ!