ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, 256 ಪಿಡಿಓ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ರಾಜ್ಯದಲ್ಲಿ ಸದ್ಯ 256 ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಭರ್ತಿ ಮಾಡಲು ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯತಿ ಕಚೇರಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ನಿವಾಸಿ ದೃಢೀಕರಣ ಪತ್ರ ಸೇರಿದಂತೆ ಒಂದೇ ಸೂರಿನಡಿ ಬರೋಬ್ಬರಿ 72 ಸೇವೆಗಳು ದೊರೆಯುವಂತೆ ಅವಕಾಶ ನೀಡಲಾಗಿದೆ. ವಿಶ್ವಗುರು ಬಸವಣ್ಣ ನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ. ಸಚಿವ ಸಂಪುಟದಲ್ಲಿ ಘೋಷಣೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು ಪಿಡಿಒ ಹಾಗೂ ಇತರ ನೌಕರರ ಕೌನ್ಸೆಲಿಂಗ್ ಮಾದರಿ ವರ್ಗಾವಣೆಗೆ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಒಟ್ಟು 125 ಗ್ರಾಮಗಳ ಸುಮಾರು 3,27,192 ಕ್ಕೂ ಹೆಚ್ಚು ಜನರಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ₹392 ಕೋಟಿಗೂ ಅಧಿಕ ಹಣ ಮಂಜೂರು ಮಾಡಲಾಗಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಸ್ಥಳೀಯ ಆಡಳಿತ ಬಲವರ್ಧನೆಗಾಗಿ ‘ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್’ ಘೋಷಣೆ. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪ್ರತಿ ತಾಲೂಕಿಗೆ ಒಬ್ಬರಂತೆ ಒಟ್ಟು 51 ಫೆಲೋಗಳನ್ನು ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.