ಬೆಂಗಳೂರು : ರಾಜ್ಯದಲ್ಲಿ ಲಕ್ಷಾಂತರ ಭಕ್ತರು ಆಗಮಿಸುವಂತಹ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದಂತಹ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು.
ವಿಧಾನಸಭೆಯಲ್ಲಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸುವ ಕುರಿತಂತೆ ಕಾಂಗ್ರೆಸ್ನ ಎಸ್. ರವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ 12ರಿಂದ 15 ಲಕ್ಷ ಭಕ್ತರು ಬರುತ್ತಾರೆ. ಅಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಅದರ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಮುಖವಾಗಿ ವಾಹನ ನಿಲುಗಡೆಗೆ ಸ್ಥಳಾವಕಾಶ, ದಾಸೋಹ ಭವನ ನಿರ್ಮಾಣ, ರಸ್ತೆ ಅಗಲೀಕರಣಕ್ಕೆ ಯೋಜನೆ ರೂಪಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ವಾರ್ಷಿಕ ಲಕ್ಷಾಂತರ ಭಕ್ತರು ಬರುವ ಮೈಸೂರಿನ ಚಾಮುಂಡೇಶ್ವರಿ, ಸವದತ್ತಿ ಯಲ್ಲಮ್ಮ ಸೇರಿದಂತೆ ಇನ್ನಿತರ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
BREAKING : ತುಮಕೂರಲ್ಲಿ ನಿಂತಿಂದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ : ಇಬ್ಬರ ಸಾವು
BREAKING : ಕೋಲಾರದಲ್ಲಿ ಮಚ್ಚಿನಿಂದ ಪತ್ನಿಯ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದ ಪತಿ