ಹಾಸನ : ಒಂದೇ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುವ ಇಬ್ಬರು ಸ್ನೇಹಿತರ ನಡುವೆ ಕೇವಲ 50 ರುಪಾಯಿಗೆ ಜಗಳ ನಡೆದಿದ್ದು, ವಿಕೋಪಕ್ಕೆ ತಿರುಗಿ ಸ್ನೇಹಿತನೊಬ್ಬ ತನ್ನ ಇನ್ನೊಬ್ಬ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದ ಅರುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಇಬ್ಬರು ಒಂದೂ ಊರಿನ ಸ್ನೇಹಿತರು. ಇಬ್ಬರೂ ಒಂದೇ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುವವರಾಗಿದ್ದಾರೆ. ನಿನ್ನೆ ಕೂಡ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ರಾತ್ರಿ ಮದ್ಯಪಾನ ಮಾಡಲು ಬಂದಿದ್ದ ವೇಳೆ ಇಬ್ಬರ ನಡುವೆ 50 ರೂ. ವಿಚಾರಕ್ಕೆ ಜಗಳ ಆರಂಭವಾಗಿದೆ. ಹೀಗೆ ಆರಂಭವಾದ ಜಗಳ ಒಬ್ಬ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿದೆ.
ಮದ್ಯಪಾನ ಮಾಡುವ ವೇಳೆ ಐವತ್ತು ರೂಪಾಯಿಗೆ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ರಾಮಚಂದ್ರ ಸಂಜೀವಪ್ಪನವರ (42) ಕೊಲೆಯಾದ ದುರ್ದೈವಿ ಎಂದು ಹೇಳಲಾಗುತ್ತಿದೆ. ರುದ್ರಯ್ಯ ಕೊಂಗವಾಡ ಕೊಲೆ ಆರೋಪಿಯಾಗಿದ್ದಾನೆ. ಎರಡು ವಾರಗಳ ಹಿಂದೆ ಇಟ್ಟಿಗೆ ಕಾರ್ಖಾನೆಗೆ ಕೂಲಿ ಕೆಲಸಕ್ಕೆ ಬಂದಿದ್ದ ರುದ್ರಯ್ಯ ಹಾಗೂ ರಾಮಚಂದ್ರ ಒಂದೇ ಗ್ರಾಮದವರಾಗಿದ್ದರು.
ಅಂದರೆ, ರುದ್ರಯ್ಯ ಹಾಗೂ ರಾಮಚಂದ್ರ ಅವರು ಬಾಗಲಕೋಟೆ ಜಿಲ್ಲೆ, ಬಾದಾಮಿ ಪಟ್ಟಣದ ಕಳ್ಳಿಪೇಟೆ ಓಣಿಯವರಾಗಿದ್ದಾರೆ. ಕಳೆದ 15 ದಿನಗಳ ಹಿಂದೆ ಹಾಸನ ಜಿಲ್ಲೆಯ ಶ್ರವಣಬೆಳಗೊಳ ಬಳಿಯ ಅರುವನಹಳ್ಳಿ ಗ್ರಾಮದ ಕೆಪಿಐ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಇಬ್ಬರೂ ಕುಡಿದ ಮತ್ತಿನಲ್ಲಿ 50 ರೂ. ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ ಆರಂಭವಾಗಿದೆ. ಈ ಜಗಳ ವಿಕೋಪಕ್ಕೆ ತಿರುಗಿದಾದ ರುದ್ರಯ್ಯ ತನ್ನ ಸ್ನೇಹಿತ ರಾಮಚಂದ್ರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ರಾಮಚಂದ್ರ ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾನೆ.
ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ ಸ್ಥಳೀಯರ ನೆರವಿನಿಂದ ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಮಾಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತನ ಸಂಬಂಧಿಕರಿಗೆ ಮಾಹಿತಿ ರವಾನಿಸಲಾಗಿದ್ದು, ಅವರಿಗೆ ಮೃತ ದೇಹವನ್ನು ರವಾನಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಚುನಾವಣಾ ಬಾಂಡ್ ವಿತರಣೆಯನ್ನು ತಕ್ಷಣವೇ ನಿಲ್ಲಿಸಿ: ಬ್ಯಾಂಕುಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
ಬಳ್ಳಾರಿ:ಹಾಸ್ಟೆಲ್ ನಲ್ಲಿ ಹುಳು ಮಿಶ್ರಿತ ಆಹಾರ ವಿತರಣೆ : ವಾರ್ಡನ್ -ಸಿಬ್ಬಂದಿ ಬದಲಾಯಿಸಲು ವಿದ್ಯಾರ್ಥಿಗಳ ಆಗ್ರಹ
BREAKING: ಅನಾಮಧೇಯ ‘ಚುನಾವಣಾ’ ಬಾಂಡ್ ‘ಮಾಹಿತಿ ಹಕ್ಕಿನ ಉಲ್ಲಂಘನೆ’: ಸುಪ್ರೀಂ ಕೋರ್ಟ್ ‘ಮಹತ್ವದ ತೀರ್ಪು’!