ಬೆಂಗಳೂರು: ಕೊಪ್ಪಳ ಜಿಲ್ಲೆಯ ಹಾಲವರ್ತಿ ಗ್ರಾಮದಲ್ಲಿ ದಲಿತರಿಗೆ ಹೋಟೆಲ್ ಪ್ರವೇಶ ನಿಷೇಧ ಮಾಡಿದ್ದಾರೆ ಎನ್ನುವುದನ್ನು ಸಹಿಸಲು ಸಾಧ್ಯವಿಲ್ಲ. ಸಂಬಂಧಪಟ್ಟವರ ವಿರುದ್ಧ ಕೂಡಲೇ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಾಲವರ್ತಿ ಗ್ರಾಮದಲ್ಲಿನ ಘಟನೆ ನನ್ನ ಗಮನಕ್ಕೆ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಭೇಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ನಾನು ಒಬ್ಬ ದಲಿತ ಮಂತ್ರಿಯಾಗಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂಬಂಧ ಅಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಜಾಗೃತಿ ಬಳಿಕವೂ ಅದೇ ರೀತಿ ಮುಂದುವರೆದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
ಕೂಡಲೇ ಗ್ರಾಮಸ್ಥರೊಂದಿಗೆ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲೆಯಲ್ಲಿ ಇಂತಹ ಪ್ರಕರಣ ಮತ್ತೊಮ್ಮೆ ಮರುಕಳಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.ಕೊಪ್ಪಳ ಜಿಲ್ಲಾ ಕೇಂದ್ರದ ಪಕ್ಕದಲ್ಲೇ ಇರುವ ಹಾಲವರ್ತಿ ಗ್ರಾಮದಲ್ಲಿ ಇನ್ನೂ ಕೂಡ ಅಸ್ಪೃಶ್ಯತೆ ತಾಂಡವವಾಡುತ್ತಿದೆ.
ಈ ಗ್ರಾಮದಲ್ಲಿ ದಲಿತರಿಗೆ ಹೋಟೆಲ್ ಮತ್ತು ಕ್ಷೌರದ ಅಂಗಡಿಗೆ ಪ್ರವೇಶ ಇರಲಿಲ್ಲ. ಗ್ರಾಮದ ಯುವಕರು ಇದನ್ನು ಖಂಡಿಸಿ, ಹೋಟೆಲ್ ಮತ್ತು ಕ್ಷೌರದ ಅಂಗಡಿ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಗ್ರಾಮ ಪಂಚಾಯತ್ ಬಳಿ ಪ್ರತಿಭಟಟನೆ ನಡೆಸಿ ಆಕ್ರೋಶ ಹೊರಹಾಕಿದರು.ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೋಟೆಲ್ ಮತ್ತು ಕ್ಷೌರದ ಅಂಗಡಿ ಮಾಲೀಕರನ್ನು ಅಧಿಕಾರಿಗಳು ವಿಚಾರಿಸಿದರು. ಇಂದು ಈ ಕುರಿತು ಅಧಿಕಾರಿಗಳು ಸಭೆ ನಡೆಸಲಿದ್ದಾರೆ.
ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ರಾಜ್ಯಸಭೆ ಕಣಕ್ಕೆ: ಮಾಜಿ ಸಿಎಂ ಹೆಚ್ಡಿಕೆ ಘೋಷಣೆ
ಚುನಾವಣಾ ಬಾಂಡ್ ವಿತರಣೆಯನ್ನು ತಕ್ಷಣವೇ ನಿಲ್ಲಿಸಿ: ಬ್ಯಾಂಕುಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
ಬಳ್ಳಾರಿ:ಹಾಸ್ಟೆಲ್ ನಲ್ಲಿ ಹುಳು ಮಿಶ್ರಿತ ಆಹಾರ ವಿತರಣೆ : ವಾರ್ಡನ್ -ಸಿಬ್ಬಂದಿ ಬದಲಾಯಿಸಲು ವಿದ್ಯಾರ್ಥಿಗಳ ಆಗ್ರಹ