ಬೆಂಗಳೂರು : ಪಡಿತರ ಚೀಟಿಗಾಗಿ (Ration Card) ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1 ರಿಂದ ವಿತರಣೆ ಮಾಡಲಾಗುವುದು ಅಂತ ಇಂದು ಸದನದಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದ್ದಾರೆ. ಅವರು ಇಂದು ವಿ ಧಾನಸಭೆಯ (Vidhan Sabha) ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ (Nayana Motappa) ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಈ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಿದ್ದೇವೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿದ್ದೇವೆ. ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ಗಳನ್ನು ವಿತರಿಸುವ ತೀರ್ಮಾನ ಕೈಗೊಂಡಿದ್ದೇವೆ ಅಂಥ ತಿಳಿಸಿದರು.
ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದ್ದು, ಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ ಜೊತೆ ಲಿಂಕ್ ಆಗಿರದ ಕಾರಣದಿಂದ ಐದು ಕೆಜಿಯ ಅಕ್ಕಿಯ ಹಣ ಹಲವು ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ, ಈ ನಿಟ್ಟಿನಲ್ಲಿ ಸೂಕ್ರಕ್ರಮ ಕೈಗೊಳ್ಳುವಂತೆ ಶಾಸಕಿ ನಯನ ಮೋಟಮ್ಮ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ದಾವಣಗೆರೆ:ಕರ್ತವ್ಯದಲ್ಲಿದ್ದಾಗಲೇ ಗುಂಡು ಹಾರಿಸಿಕೊಂಡು ‘ಆತ್ಮಹತ್ಯೆಗೆ’ ಯತ್ನಿಸಿದ ಪೋಲಿಸ್ ಪೇದೆ
‘ಮಂಗನ ಜ್ವರ’: ಸಾವುಗಳನ್ನು ತಡೆಗಟ್ಟುವುದು ಸರ್ಕಾರದ ಅತ್ಯಂತ ಆದ್ಯತೆ:ಸಚಿವ ಗುಂಡೂರಾವ್
ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ರಾಜ್ಯಸಭೆ ಕಣಕ್ಕೆ: ಮಾಜಿ ಸಿಎಂ ಹೆಚ್‌ಡಿಕೆ ಘೋಷಣೆ