ಬೆಂಗಳೂರು : ದೆಹಲಿಗೆ ಹೊರಟಿದ್ದ ನಮ್ಮ ರಾಜ್ಯ ರೈತರನ್ನು ವಶಕ್ಕೆ ಪಡೆಯಲಾಗಿದೆ ರಾಜ್ಯದ ರೈತರನ್ನು ವಶಕ್ಕೆ ಪಡೆದು ವಾರಣಾಸಿಗೆ ಸ್ಥಳಾಂತರಿಸುತ್ತಿದ್ದಾರೆ ರೈತರನ್ನು ಸ್ಥಳಾಂತರಿಸದೆ ಕೂಡಲೇ ಬಿಡುಗಡೆಗೊಳಿಸುವಂತೆ ಮಧ್ಯಪ್ರದೇಶದ ಸಿಎಂ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದು ಮನವಿ ಮಾಡಿದ್ದಾರೆ.ಮಧ್ಯಪ್ರದೇಶದ ಸಿಎಂ ಡಾ. ಮೋಹನ್ ಯಾದವ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ರಾಜ್ಯದ ರೈತರನ್ನು ಮತ್ತೆ ಪ್ರದೇಶ ವಶಕ್ಕೆ ಪಡೆದು ನಾಲ್ಕು ದಿನಗಳಾಗಿವೆ. ನ್ಯಾಯಯುತವಾಗಿ ಪ್ರತಿಭಟನೆಗೆ ತೆರಳುತ್ತಿದ್ದರು. ಅದು ಸಂವಿಧಾನಿಕ ಹಕ್ಕಾಗಿದೆ ರಾಜ್ಯದ ರೈತರನ್ನು ಭೋಪಾಲ್ ಪೊಲೀಸರು ಬಂಡಿಸಿರುವುದು ದುರದಷ್ಟಕರವಾಗಿದೆ. ಮಧ್ಯಪ್ರದೇಶದ ಪೊಲೀಸರು ರೈತರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ ಎಂದಿದ್ದಾರೆ.
ರೈತರನ್ನು ಸ್ಥಳಾಂತರಿಸದೆ ಬಿಡುಗಡೆಗೊಳಿಸುವಂತೆ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ರೈತ ಮುಖಂಡ ಕುರಬೂರು ಶಾಂತಕುಮಾರ್ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ದೂರವಾಣಿ ಕರೆ ಮಾಡಿ ರೈತರ ಯೋಗ ಕ್ಷೇಮವನ್ನು ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.
PSI ಹಗರಣ : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ್ದ ತನಿಖಾ ವರದಿ ಕುರಿತು ಇಂದು ಸದನದಲ್ಲಿ ಚರ್ಚೆ ಸಾಧ್ಯತೆ
‘ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿದೆ ‘ರಾಜ್ಯ ಸರ್ಕಾರ’ದಿಂದ ಮಾನ್ಯತೆ ಪಡೆದ ‘ಖಾಸಗಿ ಆಸ್ಪತ್ರೆ’ಗಳ ಪಟ್ಟಿ
ಕಾಂಗ್ರೆಸ್ ಪಕ್ಷದವರೇ ಕಾಂಗ್ರೆಸನ್ನು ನಿರ್ನಾಮ ಮಾಡುತ್ತಾರೆ : ಡಾ. ಅಶ್ವಥ್ ನಾರಾಯಣ ಸ್ಪೋಟಕ ಹೇಳಿಕೆ