ರಾಂಚಿ: ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ವಿಶೇಷ ಪಿಎಂಎಲ್ಎ ನ್ಯಾಯಾಲಯ ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜಾರ್ಖಂಡ್ ಮುಕ್ತಿ ಮೋರ್ಚಾದ ಕಾರ್ಯಕಾರಿ ಅಧ್ಯಕ್ಷರು ಈ ಹಿಂದೆ ಜಾರಿ ನಿರ್ದೇಶನಾಲಯದ (ಇಡಿ) ವಶದಲ್ಲಿದ್ದರು.
ಹೇಮಂತ್ ಸೊರೆನ್ ಅವರನ್ನು ಇಂದು ವಿಶೇಷ ಪಿಎಂಎಲ್ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಅವರನ್ನು ಫೆಬ್ರವರಿ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ನಾವು ಅವರಿಗೆ ಜಾಮೀನು ಅರ್ಜಿ ಸಲ್ಲಿಸುತ್ತೇವೆ” ಎಂದು ಮಾಜಿ ಮುಖ್ಯಮಂತ್ರಿ ಪರ ಹಾಜರಾದ ಅಡ್ವೊಕೇಟ್ ಜನರಲ್ ರಾಜೀವ್ ರಂಜನ್ ಹೇಳಿದರು.
ಸೊರೆನ್ ಅವರನ್ನು ನ್ಯಾಯಾಲಯದಿಂದ ರಾಂಚಿಯ ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿದೆ. ಅವರನ್ನು ಜನವರಿ 31 ರಂದು ಬಂಧಿಸಲಾಯಿತು. ಅಂದಿನಿಂದ ಇಡಿ ವಶದಲ್ಲಿದ್ದಾರೆ. ನ್ಯಾಯಾಲಯವು ಆರಂಭದಲ್ಲಿ ಐದು ದಿನಗಳ ಇಡಿ ಕಸ್ಟಡಿಯನ್ನು ನೀಡಿತು. ನಂತರ ಅದನ್ನು ಒಟ್ಟು ಏಳು ದಿನಗಳವರೆಗೆ ಎರಡು ಬಾರಿ ವಿಸ್ತರಿಸಲಾಯಿತು.
‘ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿದೆ ‘ರಾಜ್ಯ ಸರ್ಕಾರ’ದಿಂದ ಮಾನ್ಯತೆ ಪಡೆದ ‘ಖಾಸಗಿ ಆಸ್ಪತ್ರೆ’ಗಳ ಪಟ್ಟಿ