ಬೆಂಗಳೂರು : ಹಿಂದೂ ವಿವಾಹ ಕಾಯ್ದೆ, 1955 ರ ಅಡಿಯಲ್ಲಿ ರಾಜ್ಯ ಸರ್ಕಾರ ವಿವಾಹದ ಆನ್ಲೈನ್ ನೋಂದಣಿ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ವಿಶೇಷ ವಿವಾಹ ಕಾಯ್ದೆಯಡಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕೂಡ ಆನ್ಲೈನ್ ಮಾಡಲಾಗಿದೆ.
ಮಲ್ಲೇಶ್ವರಂ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಾಯೋಗಿಕವಾಗಿ ಈ ಸೌಲಭ್ಯಕ್ಕೆ ಚಾಲನೆ ನೀಡಿದರು.ವಿಶೇಷ ವಿವಾಹ ಕಾಯ್ದೆಯಡಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್ಲೈನ್ನಲ್ಲಿ ಮಾಡಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಆನ್ಲೈನ್ನಲ್ಲಿ ಒದಗಿಸಿದ ನಂತರ, ಸಬ್ರಿಜಿಸ್ಟ್ರಾರ್ ಕಚೇರಿಗೆ ನೋಂದಣಿಗೆ ಭೇಟಿ ನೀಡಬೇಕಾಗುತ್ತದೆ.
ಅಲ್ಲದೆ ಈ ಒಂದು ಆನ್ಲೈನ್ ನೋಂದಣಿ ಸೌಲಭ್ಯವನ್ನು ಅತ್ಯಂತ ಶೀಘ್ರದಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿರುವ ಉಪ ನೊಂದಣಾಧಿಕಾರಿಗಳ ಕಚೇರಿಗಳಿಗೂ ವಿಸ್ತರಿಸಲಾಗುತ್ತದೆ.ಆಧಾರ್ ದೃಢೀಕರಣವನ್ನು ನೀಡಲು ಬಯಸುವವರು ಮನೆಯಿಂದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆದರೆ ಆಧಾರ್ ದೃಢೀಕರಣವನ್ನು ಮಾಡದಿರುವವರು ಸಬ್-ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡುವ ಮೂಲಕ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳಬಹುದು.
BREAKING: ತೆರಿಗೆ ವಂಚನೆ: ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ವಿಮಾನಯಾನ ಸಂಸ್ಥೆಗಳಿಗೆ DGGI ‘ಸಮನ್ಸ್’
‘ಚುನಾವಣಾ ಬಾಂಡ್’ ರದ್ದು : ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆಎಸ್ಆರ್ಟಿಸಿಗು ಬಂತು ‘ಡಿಜಿಟಲ್ ಪೇಮೆಂಟ್’ ಸಿಸ್ಟಮ್ : 10 ಸಾವಿರ ಮಷಿನ್ ಗಳಿಗೆ ಟೆಂಡರ್