ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಂಪರ್ ಕೊಡುಗೆಯನ್ನು ಘೋಷಿಸಲಾಗಿದೆ. ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ವ್ಯವಸ್ಥೆ, ರೋಪ್ ವೇ ನಿರ್ಮಿಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳ ಅಭಿವೃದ್ಧಿ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ನಿರ್ಮಿಸೋದಕ್ಕೆ ಅನುದಾನವನ್ನು ಒದಗಿಸೋ ಘೋಷಣೆಯನ್ನು ಇಂದಿನ ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ.
ಅಂಜನಾದ್ರಿ ಬೆಟ್ಟದ ಸುತ್ತಾಮುತ್ತಾ ಅಭಿವೃದ್ಧಿ ಮಾಡೋಲಾಗುತ್ತದೆ. ಬೆಂಗಳೂರಿನ ಆಕರ್ಷಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂಬುದಾಗಿ ಹೇಳುವ ಮೂಲಕ ಪ್ರವಾಸೋದ್ಯಮಕ್ಕೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ ನೀಡಲಾಗಿದೆ.
BUDGET BREAKING: ‘ಮದ್ಯಪ್ರಿಯ’ರಿಗೆ ರಾಜ್ಯ ಸರ್ಕಾರದಿಂದ ಶಾಕ್: ‘ಬಿಯರ್ ದರ’ ಮತ್ತೆ ಹೆಚ್ಚಿಸಲು ನಿರ್ಧಾರ