ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಈ ನಡುವೆ ಸದದಲ್ಲಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆಯಲ್ಲಿ ವಿರೋಧ ಪಕ್ಷಗಳಿಂದ ಪ್ರತಿಭಟನೆ ನಡೆಸುತ್ತಿರುವುದು ಕಂಡು ಬಂಧಿದೆ. ಸಿದ್ದರಾಮಯ್ಯ ಅವರು ಈ ವೇಳೆಯಲ್ಲಿ ಅವರು ಸದನದಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಇದಲ್ಲದೇ ಜೆಟ್ ಅನ್ನು ಕೇಂದ್ರದ ವಿರುದ್ಧ ಟೀಕೆಗೆ ಬಳಸಿಕೊಳ್ಳುತ್ತೀರಾ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದರು. ಈ ವೇಳೆ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಸ್ಪೀಕರ್ ಯುಟಿ ಖಾದರ್ ಪರಿಪರಿಯಾಗಿ ಬೇಡಿಕೊಂಡರೂ ಪ್ರತಿಪಕ್ಷ ನಾಯಕರು ಆಕ್ರೋಶದ ಮಾತುಗಳನ್ನು ಕಡಿಮೆ ಮಾಡಲಿಲ್ಲ.