ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ರಾಜ್ಯ ಬಜೆಟ್ 2024-25ಅನ್ನು ಮಂಡಿಸಿ, ಕೃಷಿ ಕ್ಷೇತ್ರಕ್ಕೆ ಬಂಪರ್ ಗಿಫ್ಟ್ ನೀಡಿದ್ದಾರೆ. ಹಾಗಾದ್ರೇ ಅವರು ಇಂದಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಏನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ.
ಕೃಷಿ
ಹೊಲವನುತ್ತು ಬಿತ್ತೋರು
ಬೆಳೆಯ ಕುಯ್ದು ಬೆವರೋರು
ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು
– ಪದ್ಮಶ್ರೀ ಡಾ|| ಸಿದ್ದಲಿಂಗಯ್ಯ
- ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು;
- ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು.
- ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು.
- ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು.
- ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು.
- ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು.
- ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು.
- ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು.
- ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು.
- ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಅನ್ನು ಸ್ಥಾಪಿಸಲಾಗುವುದು.
- ನಮ್ಮ ಮಿಲ್ಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್ಸ್ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು.
- ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ
1,000 ದಂತೆ ಒಟ್ಟು 5,೦೦೦ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು.
- ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
- ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ
ಸಲಹೆ ನೀಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ e-SAP ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲು ಕ್ರಮ ವಹಿಸಲಾಗುವುದು.
- ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಯ ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು.
- ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು ಕ್ರಮವಹಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕಾಗಿ PMFME ಯೋಜನೆಯಡಿಯಲ್ಲಿ 80 ಕೋಟಿ ರೂ.ಗಳನ್ನು ಒದಗಿಸಲಾಗುವುದು.
- ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು.
- ಕೃಷಿ ನಾವೀನ್ಯತೆಯ ಯುಗದಲ್ಲಿ ಪಾರಂಪರಿಕ ಕೃಷಿ ಪದ್ಧತಿಯಲ್ಲಿ ಗಣನೀಯ ಬದಲಾವಣೆಗಳಾಗಿದ್ದು, ಉಪಗ್ರಹ ಚಿತ್ರ, ಸೆನ್ಸರ್ಗಳ ಬಳಕೆ ಮತ್ತು ಮಷಿನ್ ಲರ್ನಿಂಗ್ ನಂತಹ (Machine Learning) ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆಯ ಉತ್ಪಾದಕತೆ ಮುನ್ಸೂಚನೆಯನ್ನು ಮಾಡಲು ಒಂದು ದತ್ತಾಂಶವನ್ನು ಅಭಿವೃದ್ಧಿಪಡಿಸಲಾಗುವುದು.
- ರೈತ ಉತ್ಪಾದಕ ಸಂಸ್ಥೆಗಳನ್ನು (FPO) ಇನ್ನಷ್ಟು ಸದೃಢ
ಮತ್ತು ಸುಸ್ಥಿರವಾಗಿ ಕಾರ್ಯನಿರ್ವಹಿಸಲು ಪೂರಕವಾದ
ತರಬೇತಿ, ಮಾರ್ಗದರ್ಶನ ಹಾಗೂ ಬೆಂಬಲ ನೀಡುವ
Agri Accelerator Platform ಮೂಲಕ ಕೃಷಿ ವಲಯದ Start-up ಗಳನ್ನು ಉತ್ತೇಜಿಸಲಾಗುವುದು.
- ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು.