Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ನಿಮ್ಮ ಮೊಬೈಲ್ ನಲ್ಲಿರುವ ‘ಫ್ಲೈಟ್ ಮೋಡ್’ನ ರಹಸ್ಯ ಪ್ರಯೋಜನಗಳೇನು ಗೊತ್ತಾ?

08/06/2025 8:16 AM

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಲಿದ್ದಾರೆ ಮಠಾಧೀಶರರು.!

08/06/2025 8:08 AM

SHOCKING : ಪುಟ್ ಪಾತ್ ನಲ್ಲಿ ಮಲಗಿದ್ದ ವ್ಯಕ್ತಿಯ ಪಕ್ಕದಲ್ಲೇ ನಡೆದುಕೊಂಡು ಹೋದ ಸಿಂಹ : ವಿಡಿಯೋ ವೈರಲ್| WATCH VIDEO

08/06/2025 8:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING: ‘ರಾಜ್ಯ ಬಜೆಟ್’ನಲ್ಲಿ ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ’ಗೆ ಸಿಕ್ಕಿದ್ದೇನು.? ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

BUDGET BREAKING: ‘ರಾಜ್ಯ ಬಜೆಟ್’ನಲ್ಲಿ ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ’ಗೆ ಸಿಕ್ಕಿದ್ದೇನು.? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0916/02/2024 12:00 PM

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯಬಜೆಟ್ 2024-25 ಮಂಡಿಸುತ್ತಿದ್ದಾರೆ. ಇಂದಿನ ಬಜೆಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕೊಟ್ಟ ಕೊಡುಗೆ ಏನು ಎಂಬುದಾಗಿ ಮುಂದೆ ಸಂಪೂರ್ಣ ಮಾಹಿತಿ ಓದಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎಂದು ಹೇಳಿದರು.

2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು. Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಹೇಳಿದರು.

ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲಾ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುವುದು. ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು ಎಂದರು.

ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು;

  • ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು.
  • ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗುವುದು.
  • ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು.
  • ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು.

2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದರು.

BUDGET BREAKING: ರಾಜ್ಯದ ‘ಕೊಳಗೇರಿ ನಿವಾಸಿ’ಗಳಿಗೆ ಗುಡ್ ನ್ಯೂಸ್: ‘ಪ್ರಧಾನ ಮಂತ್ರಿ ಆವಾಸ್‌ ಯೋಜನೆ’ಯ ವಂತಿಗೆ ಮಿತಿ 1 ಲಕ್ಷಕ್ಕೆ ಇಳಿಕೆ

Share. Facebook Twitter LinkedIn WhatsApp Email

Related Posts

ಗಮನಿಸಿ : ನಿಮ್ಮ ಮೊಬೈಲ್ ನಲ್ಲಿರುವ ‘ಫ್ಲೈಟ್ ಮೋಡ್’ನ ರಹಸ್ಯ ಪ್ರಯೋಜನಗಳೇನು ಗೊತ್ತಾ?

08/06/2025 8:16 AM2 Mins Read

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಲಿದ್ದಾರೆ ಮಠಾಧೀಶರರು.!

08/06/2025 8:08 AM1 Min Read

BREAKING : ವಿಕೇಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರು : ಭಾರೀ ಟ್ರಾಫಿಕ್ ಜಾಮ್.!

08/06/2025 7:48 AM1 Min Read
Recent News

ಗಮನಿಸಿ : ನಿಮ್ಮ ಮೊಬೈಲ್ ನಲ್ಲಿರುವ ‘ಫ್ಲೈಟ್ ಮೋಡ್’ನ ರಹಸ್ಯ ಪ್ರಯೋಜನಗಳೇನು ಗೊತ್ತಾ?

08/06/2025 8:16 AM

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಲಿದ್ದಾರೆ ಮಠಾಧೀಶರರು.!

08/06/2025 8:08 AM

SHOCKING : ಪುಟ್ ಪಾತ್ ನಲ್ಲಿ ಮಲಗಿದ್ದ ವ್ಯಕ್ತಿಯ ಪಕ್ಕದಲ್ಲೇ ನಡೆದುಕೊಂಡು ಹೋದ ಸಿಂಹ : ವಿಡಿಯೋ ವೈರಲ್| WATCH VIDEO

08/06/2025 8:01 AM

ಕಳೆದ 11 ವರ್ಷಗಳಲ್ಲಿನ ಉಪಕ್ರಮಗಳು ರೈತರ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡಿದೆ: ಪ್ರಧಾನಿ ಮೋದಿ

08/06/2025 7:49 AM
State News
KARNATAKA

ಗಮನಿಸಿ : ನಿಮ್ಮ ಮೊಬೈಲ್ ನಲ್ಲಿರುವ ‘ಫ್ಲೈಟ್ ಮೋಡ್’ನ ರಹಸ್ಯ ಪ್ರಯೋಜನಗಳೇನು ಗೊತ್ತಾ?

By kannadanewsnow5708/06/2025 8:16 AM KARNATAKA 2 Mins Read

ನೀವು ಏರ್ಪ್ಲೇನ್ ಮೋಡ್ ಅನ್ನು ಆನ್ ಮಾಡಿದಾಗ, ನಿಮ್ಮ ಫೋನ್ನಲ್ಲಿರುವ ಎಲ್ಲಾ ವೈರ್ಲೆಸ್ ಸಂವಹನ ವೈಶಿಷ್ಟ್ಯಗಳು ನಿಷ್ಕ್ರಿಯಗೊಳ್ಳುತ್ತವೆ. ನೀವು ಕರೆಗಳನ್ನು…

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಲಿದ್ದಾರೆ ಮಠಾಧೀಶರರು.!

08/06/2025 8:08 AM

BREAKING : ವಿಕೇಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರು : ಭಾರೀ ಟ್ರಾಫಿಕ್ ಜಾಮ್.!

08/06/2025 7:48 AM

BREAKING : ಮಂಡ್ಯದಲ್ಲಿ ಘೋರ ದುರಂತ : ಹಳ್ಳದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು.!

08/06/2025 7:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.