ವಸಂತ್ ಬಿ ಈಶ್ವರ ಗೆರೆ ಜೊತೆಗೆ ಅವಿನಾಶ್ ಆರ್ ಭೀಮಸಂದ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.
BUDGET BREAKING: ‘ರಾಜ್ಯ ಬಜೆಟ್’ನಲ್ಲಿ ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ’ಗೆ ಬಂಫರ್ ಗಿಫ್ಟ್
ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಮಹಿಳೆಯರು ಮತ್ತು ಯುವಜನತೆಗೆ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ
ಇದೇ ವೇಳೆ ಅವರು ಬಜೆಟ್ನಲ್ಲಿ ಬೆಂಗಳೂರಿನ BIEC ನಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು. ಅಂತ ತಿಳಿಸಿದರು. ಇನ್ನೂ ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನದಟ್ಟಣೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ರಿಂಗ್ ರಸ್ತೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪೆರಿಫೆರಲ್ ರಿಂಗ್ ರಸ್ತೆಯನ್ನು ಪಿಪಿಪಿ ಅಥವಾ ಟೌನ್ ಪ್ಲಾನಿಂಗ್ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು ಅಂತ ತಿಳಿಸಿದರು.